ಫೆಬ್ರವರಿ 17ಕ್ಕೆ ರಾಜ್ಯ ಬಜೆಟ್ ಮಂಡನೆ…

47
firstsuddi

ಬೆಂಗಳೂರು : ಫೆಬ್ರವರಿ 17ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ಬೆಳಗ್ಗೆ 10:15ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಇಂದು ವಿಧಾನಸಭೆಯಲ್ಲಿ ಈ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿದೆ.

ಈಗಾಗಲೇ ಬಜೆಟ್ ಅಧಿವೇಶನ ಫೆಬ್ರವರಿ 10ರಂದು ಆರಂಭವಾಗಿದ್ದು, ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯುತ್ತಿದೆ. ಫೆಬ್ರವರಿ 17ರಂದು ಬಜೆಟ್ ಮಂಡನೆಯಾಗಿ ಫೆಬ್ರವರಿ 20ರಿಂದ 22ರವರೆಗೂ ಅದರ ಮೇಲೆ ಚರ್ಚೆ ನಡೆಯಲಿದೆ. ಫೆಬ್ರವರಿ 22ರಂದು ಸರ್ಕಾರದಿಂದ ಉತ್ತರ ಬರಲಿದೆ.

ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಇದು ಕೊನೆಯ ಬಜೆಟ್ ಆಗಿದೆ. ಏಪ್ರಿಲ್–ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವುದರಿಂದ ಬಜೆಟ್ ಮೇಲೆ ಸಾಕಷ್ಟು ಕುತೂಹಲ ಹೆಚ್ಚಿದೆ.