ಫೇಸ್‍ಬುಕ್‍ನಲ್ಲಿ ಪ್ರಚೋದನಕಾರಿ ಪೋಸ್ಟ್-ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ನಿವಾಸದ ಮೇಲೆ ದಾಳಿ ನಡೆಸಿದ ಕಿಡಿಗೇಡಿಗಳು…

290
firstsuddi

ಬೆಂಗಳೂರು : ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಸಂಬಂಧಿಯೊಬ್ಬರು ಫೇಸ್‍ಬುಕ್‍ನಲ್ಲಿ ಕೋಮು ಪ್ರಚೋದಿತ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಕಿಡಿಗೇಡಿಗಳು ಗುಂಪಾಗಿ ಬಂದು ಕಾವಲ್‍ಭೈರಸಂದ್ರದಲ್ಲಿರುವ ಶಾಸಕರ ಮನೆ ಮೇಲೆ ಕಲ್ಲು ತೂರಾಟ ನಡೆಸಿ, ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.
ಘಟನೆಯಲ್ಲಿ ಶಾಸಕರ ಮನೆ ಕಿಟಕಿ ಗಾಜುಗಳು ಪುಡಿ ಪುಡಿಯಾಗಿದ್ದು, ಕಚೇರಿ ಬಳಿ ನಿಂತಿದ್ದ ಕಾರುಗಳಿಗೆ ಬೆಂಕಿ ಹಚ್ಚಿದ್ದಾರೆ. ಬೆಂಕಿಯನ್ನು ನೋಡಿ ಅಲ್ಲಿದ್ದ ಜನರು ಓಡಿ ಹೋಗಿ ಸುರಕ್ಷಿತ ಸ್ಥಳಗಳಿಗೆ ತೆರಳಿದ್ದಾರೆ. ಪೊಲೀಸರು ಅಕ್ಕಪಕ್ಕದ ಎಲ್ಲಾ ರಸ್ತೆಗಳನ್ನು ಮುಚ್ಚಿದ್ದು, ಪೊಲೀಸರ ಮೇಲೆಯೂ ಕೂಡಾ ಕಿಡಿಗೇಡಿಗಳು ದಾಳಿ ನಡೆಸಿದ್ದಾರೆ.
ಸಾಮಾಜಿಕ ಜಾಲತಾನದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಶಾಸಕರ ಸಂಬಂಧಿ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂಥೆ ಆಗ್ರಹಿಸಿ ಕೆ.ಜಿ. ಹಳ್ಳಿ ಪೊಲೀಸ್ ಠಾಣೆಯ ಮುಂಭಾಗ ನೂರಾಋಉ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದು, ಪರಿಸ್ಥಿತಿ ಬಿಗಡಾಯಿಸಿದೆ. ಫೇಸ್‍ಬುಕ್‍ನಲ್ಲಿ ಶಾಸಕರ ಸಂಬಂದಿಯೊಬ್ಬರು ಮುಸ್ಲಿಂ ವಿರೋಧಿ ಪೋಸ್ಟ್ ಹಾಕಿದ್ದರು ಎನ್ನಲಾಗಿದೆ.
ತಡರಾತ್ರಿ ಶ್ರೀನಿವಾಸ್ ಮೂರ್ತಿ ನಿವಾಸದ ಮೇಲೆ 15ಕ್ಕೂ ಹೆಚ್ಚು ಕಿಡಿಗೇಡಿಗಳು ದಾಳಿ ನಡೆಸಿದ್ದಾರೆ. ಈಗಾಗಲೇ ಪೊಲೀಸ್ ಠಾಣಾ ಆವರಣದಲ್ಲಿ ಕೆಎಸ್‍ಆರ್‍ಪಿ ತುಕಡಿಗಳನ್ನು ನಿಯೋಜಿಸಲಾಗಿದೆ. ಪರಿಸ್ಥಿತಿ ಪೂರ್ವ ವಿಭಾಗದ ಎಲ್ಲಾ ಪೊಲೀಸ್ ಇನ್ಸ್‍ಪೆಕ್ಟರ್ ಹಾಗೂ ಸಿಬ್ಬಂದಿಯನ್ನು ಕೆ.ಜಿ. ಹಳ್ಳಿ ಠಾಣೆ ಬಳಿ ಬರುವಂತೆ ಸೂಚನೆ ನೀಡಲಾಗಿದೆ. ಅಖಂಡ ಶ್ರೀನಿವಾಸ್ ಮೂರ್ತಿ ಅವರ ಮನೆ ಮುಂಭಾಗವೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕೆ.ಜಿ. ಹಳ್ಳಿ ಪೊಲೀಸ್ ಠಾಣೆ ಬಳಿ ಶಾಸಕ ಜಮೀರ್ ಅಹಮ್ಮದ್ ಅವರು ಭೇಟಿ ನೀಡಿದ್ದು, ಗಲಾಟೆ ಬಗ್ಗೆ ಮಾಹಿತಿಯನ್ನು ಪಡೆಯುತ್ತಿದ್ದಾರೆ. ಪರಿಸ್ಥಿತಿ ತಹಬದಿಗೆ ಬಂದಂತೆ ಕಾಣುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮುಂದುವರೆಸಲಾಗಿದೆ.
ಇನ್ನು, ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ ಶಾಸಕ ಅಖಮಡ ಶ್ರೀನಿವಸ್ ಮೂರ್ತಿ ಏನೇ ಆಗಿದ್ದರೂ ನಾವೆಲ್ಲಾ ಅಣ್ಣ ತಮ್ಮಂದಿರಂಥೆ ಇರೋಣ. ಪೋಸ್ಟ್ ಹಾಕಿದ್ದ ಕಿಡಿಗೇಢಿಗಳಣ್ನು ಈಗಾಗಲೇ ಬಂಧಿಸಲಾಗಿದೆ. ಗಲಾಟೆ ಮಾಡಬೇಡಿ. ತನಿಖೆಯಿಂದ ಎಲ್ಲಾ ಹೊರಬರಲಿದೆ ಎಂದು ಮನವಿ ಮಾಡಿಕೊಂಡಿದ್ದಾರೆ.