ಫೋನ್​ನಲ್ಲಿ ಮಾತನಾಡುತ್ತಿದ್ದಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು…

48
firstsuddi

ಹಾಸನ : ಫೋನ್​ನಲ್ಲಿ ಮಾತನಾಡುತ್ತಿದ್ದಾಗಲೇ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ.

ಹೊಳೆನರಸೀಪುರದ ಕಾರ್ಯಾಲಯ ಬಡಾವಣೆಯ ನಿವಾಸಿ ವೀರೂಪಾಕ್ಷ(40) ಮೃತ ದುರ್ದೈವಿ. ಇವರು ಮೆಡಿಕಲ್ ಶಾಪ್ ನಡೆಸುತ್ತಿದ್ದರು. ಜಿಲ್ಲೆಯ ಹೊಳೆನರಸೀಪುರ ಪಟ್ಟಣದ ಅರಣ್ಯ ಕಚೇರಿ ಬಳಿ ಘಟನೆ ನಡೆದಿದ್ದು, ಘಟನೆಯ ದೃಶ್ಯಗಳು ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ವೀರೂಪಾಕ್ಷ ಅಂಗಡಿಯ ಮುಂಭಾಗದಲ್ಲಿ ಕುಳಿತು ಮೊಬೈಲ್ ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ನೋಡ ನೋಡುತ್ತಿದ್ದಂತೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅಲ್ಲಿದ್ದ ಸ್ಥಳೀಯರು ವೀರೂಪಾಕ್ಷರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಆದರೆ ವಿರೂಪಾಕ್ಷ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.