ಫೋನ್‌ನಲ್ಲಿ ಮಾತಾಡಿಕೊಂಡು ಅಡ್ಡ ಬಂದ ಬೈಕ್ ಸವಾರ ; ಮತ್ತೊಬ್ಬ ಬೈಕ್ ಸವಾರನ ಕೈಮೇಲೆ ಹತ್ತಿದ ಲಾರಿ…

130
firstsuddi

ಚಿಕ್ಕಮಗಳೂರು : ನಗರದ ಕೆ.ಎಂ.ರಸ್ತೆಯಲ್ಲಿನ ಕಾಂಗ್ರೆಸ್ ಕಚೇರಿ ಮುಂಭಾಗ ಫೋನ್ ನಲ್ಲಿ ಮಾತನಾಡುತ್ತ ಬಂದಿರುವ ಬೈಕ್ ಸವಾರ ಎದುರಿಗೆ ಬಂದ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಆತ ರಸ್ತೆಗೆ ಬಿದ್ದಿದ್ದಾನೆ. ಈ ವೇಳೆ ಹಿಂದಿನಿಂದ ಬಂದ ಲಾರಿ ಆತನ ಎಡಗೈ ಮೇಲೆ ಹತ್ತಿದೆ.

ಫೋನಿನಲ್ಲಿ ಮಾತನಾಡಿಕೊಂಡು ಬಂದ ಯುವಕನನ್ನು ವಿಶ್ವಾಸ್ ಎಂದು ಗುರುತಿಸಲಾಗಿದ್ದು, ಅಪಘಾತಕ್ಕೀಡಾದ ವ್ಯಕ್ತಿಯನ್ನ 55 ವರ್ಷದ ಸುಂದರ್ ಎಂದು ಗುರುತಿಸಲಾಗಿದೆ.

ಅಪಘಾತದಿಂದ ಸುಂದರ್ ಅವರ ಎಡಗೈಗೆ ಗಂಭೀರ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.