ಫ್ಲೈಓವರ್ ಮೇಲಿಂದ ಜಿಗಿದು ಕರ್ನಾಟಕ ವಿದ್ಯುತ್ ಕಾರ್ಖಾನೆ ಗುತ್ತಿಗೆ ನೌಕರ ಆತ್ಮಹತ್ಯೆ…

34
firstsuddi

ಬೆಂಗಳೂರು: ಇಲ್ಲಿನ ನಾಯಂಡಹಳ್ಳಿ ಫ್ಲೈಓವರ್ ಮೇಲಿನಿಂದ ಜಿಗಿದು ಕರ್ನಾಟಕ ವಿದ್ಯುತ್ ಕಾರ್ಖಾನೆಯ ಗುತ್ತಿಗೆ ನೌಕರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ನವೀನ್ ಕುಮಾರ್ (30) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮೃತ ನವೀನ್ ಜ್ಞಾನಭಾರತಿ ನಿವಾಸಿಯಾಗಿದ್ದು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದನು.

ನವೀನ್ ಇಂದು ಬೆಳಿಗ್ಗೆ 8:20ರ ಸುಮಾರಿಗೆ ಫ್ಲೈಓವರ್ ಮೇಲೆ ಬೈಕ್ ಪಾರ್ಕ್ ಮಾಡಿ, ಏಕಾಏಕಿ ಕೆಳಗೆ ಜಿಗಿದಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ನವೀನ್ 2 ತಿಂಗಳ ಹಿಂದೆ ಮದುವೆಯಾಗಿದ್ದ, ಕವಿಕಾ (ಕರ್ನಾಟಕ ವಿದ್ಯುತ್ ಕಾರ್ಖಾನೆ)ದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ. ಕೆಲಸದ ಮೇಲೆ ಹೋಗಿ ಬರ್ತೀನಿ ಅಂತಾ ಏಪ್ರಿಲ್ 11ರಂದು ಮನೆಯಿಂದ ಹೊರಟಿದ್ದ ನವೀನ್, ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸದ್ಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನೆ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.