ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ-ರಾಜ್ಯದ ಹಲವೆಡೆ 5 ದಿನ ಭಾರಿ ಮಳೆ ಸಾಧ್ಯತೆ…

428
firstsuddi

ಬೆಂಗಳೂರು : ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಕಾರಣ ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಚಂಡಮಾರುತ ಕಾಣಿಸಿಕೊಂಡಿದ್ದು, ಇದರ ಪರಿಣಾಮ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಚಿಕ್ಕಬಳ್ಳಾಪುರ, ಕೊಡಗು, ಮಂಡ್ಯ, ತುಮಕೂರು, ರಾಮನಗರ, ಚಿತ್ರದುರ್ಗ, ದಾವಣಗೆರೆ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಇಂದಿನಿಂದ ಡಿ. 12ರ ವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.