ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ-ರಾಜ್ಯದ ಹಲವೆಡೆ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ…

424
firstsuddi

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದ ಹಲವೆಡೆ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬಾಗಲಕೋಟೆ, ಕಲಬುರ್ಗಿ, ಬೀದರ್, ರಾಯಚೂರು, ಬೀದರ್, ಬೆಳಗಾವಿ, ವಿಜಯಪುರ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಗುಡು ಸಹಿತ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಲೆನಾಡು, ತುಮಕೂರು, ಚಿತ್ರದುರ್ಗ, ಕೋಲಾರ, ದಕ್ಷಿಣ ಕನ್ನಡ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಅಂಡಮಾನ್ ಭಾಗದಲ್ಲಿ ವಾಯುಭಾರ ಕುಸಿತ ಹೆಚ್ಚಾಗಿದ್ದು, ಇದು ಚಂಡಮಾರುತವಾಗಿ ಮಾರ್ಪಾಡುವ ಸಾಧ್ಯತೆಯಿದ್ದು, ಇದರಿಂದ ಇಂದಿನಿಂದ ಅ.14ರ ವರೆಗೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಅವರು ತಿಳಿಸಿದ್ದಾರೆ.