ಬಂಟ್ವಾಳದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ…

61
firstsuddi

ದಕ್ಷಿಣ ಕನ್ನಡ : ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ನಿನ್ನೆ ಅಪ್ರಾಪ್ತೆಯ ಮೇಲೆ ಐವರು ಕಾಮುಕರು ಅತ್ಯಾಚಾರ ಎಸಗಿದ್ದು, ಈ ಬಗ್ಗೆ ಸ್ವತಃ ಬಾಲಕಿಯೇ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾಳೆ.

ಕಾಮುಕರು ಬಂಟ್ವಾಳದಿಂದ ಬಾಲಕಿಯನ್ನು ಅಪಹರಿಸಿ ಅಮ್ಟಾಡಿಯ ರೂಂ ಒಂದಕ್ಕೆ ಕರೆದೊಯ್ದಿದ್ದಾರೆ. ನಂತರ ಅಲ್ಲಿ ಬಾಲಕಿಗೆ ಮತ್ತು ಬರಿಸಿ ಅತ್ಯಾಚಾರ ಮಾಡಿದ್ದಾರೆ. ಸದ್ಯ ಬಾಲಕಿಯನ್ನು ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.