ಬಂಟ್ವಾಳ : ಒಂಟಿ ಮಹಿಳೆಯ ಮನೆಗೆ ಕಳ್ಳರು ನುಗ್ಗಿ ಕೈಕಾಲು ಕಟ್ಟಿ ಹಾಕಿ ದರೋಡೆ…

134
firstsuddi

ಬಂಟ್ವಾಳ : ಒಂಟಿ ಮಹಿಳೆಯಿರುವ ಮನೆಗೆ ನುಗ್ಗಿ ಕಳ್ಳರು ಮಹಿಳೆಯ ಕೈಕಾಲು ಕಟ್ಟಿ ಹಾಕಿ ದರೋಡೆ ಮಾಡಿರುವ ಘಟನೆ ವಿಟ್ಲ ಮೇಗಿನಪೇಟೆಯಲ್ಲಿ ನಡೆದಿದೆ. ಮೇಗಿನಪೇಟೆ ನಿವಾಸಿ, ಒಂಟಿಯಾಗಿ ಜೀವನ ನಡೆಸುತ್ತಿರುವ ಲಲಿತಾ ಅವರ ಮನೆಯ ಮುಂಬಾಗಿಲು ಮೂಲಕ ಕಳ್ಳರು ನುಗ್ಗಿ ಲಲಿತಾ ಅವರಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಬಳಿಕ ಬಾಯಿಗೆ ಬಟ್ಟೆ ತುರುಕಿ, ಕೈ ಕಾಲು ಕಟ್ಟಿ ಹಾಕಿ, ಮನೆಯೊಳಗಡೆ ಚಿನ್ನಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಆದರೆ ಚಿನ್ನಾಭರಣ ಸಿಗದ ಹಿನ್ನೆಲೆ, ಮಹಿಳೆಯ ಕುತ್ತಿಗೆಯಲ್ಲಿದ್ದ ಬೆಳ್ಳಿಯ ಸರ ಎಗರಿಸಿ, ಮನೆ ಮುಂಭಾಗದ ಬಾಗಿಲಿಗೆ ಬೀಗ ಹಾಕಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಬೆಳಗ್ಗೆ ಜೋರಾಗಿ ಸುರಿಯುತ್ತಿರುವ ಮಳೆಯ ವೇಳೆ ಈ ಕೃತ್ಯ ಎಸೆಗಿದ್ದು, ಮನೆಯ ಹಿಂಬದಿಯ ಬಾಗಿಲು ಮೂಲಕ ಮಹಿಳೆ ಬೊಬ್ಬೆ ಹೊಡೆಯುತ್ತಾ ಹೊರಗಡೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಬಳಿಕ ಸ್ಥಳೀಯರು ಲಲಿತಾ ಅವರನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಎಸೈ ವಿನೋದ್ ಕುಮಾರ್ ರೆಡ್ಡಿ ಮತ್ತು ಸಿಬ್ಬಂದಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.