ನವದೆಹಲಿ : ಇಂದು ದೇಶದಾಧ್ಯಂತ ಮುಸಲ್ಮಾನರು ಬಕ್ರೀದ್ ಹಬ್ಬವನ್ನು ಆಚರಿಸುತ್ತಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮುಸಲ್ಮಾನರಿಗೆ ಶುಭ ಕೋರಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟ್ವೀಟ್ ಮಾಡಿದ್ದು, “ ಎಲ್ಲಾ ಸಹವರ್ತಿ ನಾಗರಿಕರಿಗೆ ವಿಶೇಷವಾಗಿ ಭಾರತ ಮತ್ತು ವಿದೇಶದಲ್ಲಿರುವ ಎಲ್ಲಾ ನಮ್ಮ ಮುಸ್ಲಿಂ ಸಹೋದರ ಸಹೋದರಿಯರಿಗೆ ಈದ್ ಮುಬಾರಕ್. ಬಕ್ರೀದ್ ಪ್ರೀತಿ, ಭ್ರಾತೃತ್ವ ಮತ್ತು ಮಾನವೀಯತೆಯ ಸೇವೆಯನ್ನು ಸಂಕೇತಿಸುತ್ತದೆ. ನಮ್ಮ ಸಂಯೋಜಿತ ಸಂಸ್ಕೃತಿಯನ್ನು ಪ್ರತಿನಿಧಿಸುವ ಈ ಸಾರ್ವತ್ರಿಕ ಮೌಲ್ಯಗಳಿಗೆ ನಾವು ಬದ್ಧರಾಗೋಣ ಎಂದು ಟ್ವೀಟ್ ಮಾಡಿ ಶುಭ ಕೋರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಶುಭಕೋರಿ ಟ್ವೀಟ್ ಮಾಡಿದ್ದು, “ ತ್ಯಾಗ ಹಾಗೂ ಬಲಿದಾನದ ಸಂಕೇತವಾದ ಈದ್-ಅಲ್-ಅಧಾದ ಸಂದರ್ಭದಲ್ಲಿ ನಾನು ಮುಸಲ್ಮಾನರಿಗೆ ಶುಭಕೋರುತ್ತೇನೆ. ಇದು ನಮ್ಮ ಸಮಾಜದಲ್ಲಿ ಇದು ನಮ್ಮ ಸಮಾಜದಲ್ಲಿ ಶಾಂತಿ ಮತ್ತು ಸಂತೋಷದ ಮನೋಭಾವವನ್ನು ಹೆಚ್ಚಿಸುತ್ತದೆ ಎಂದು ನಾನು ಭಾವಿಸುತ್ತೇನೆ. ಈದ್ ಮುಬಾರಕ್! ಎಂದು ಟ್ವೀಟ್ ಮಾಡಿ ಶುಭಕೋರಿದ್ದಾರೆ