ಬಕ್ರೀದ್ ಹಬ್ಬಕ್ಕೆ ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ.

57
firstsuddi

ಬೆಂಗಳೂರು : ಮುಸ್ಲಿಮರು ಭಾನುವಾರ ಬಕ್ರೀದ್ ಹಬ್ಬವನ್ನು ರಾಜ್ಯಾದ್ಯಂತ ಆಚರಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಬಕ್ರೀದ್ ಹಬ್ಬಕ್ಕೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಗೋಹತ್ಯೆ ನಿಷೇಧ ಕಾಯ್ದೆ ಉಲ್ಲಂಘನೆಯಾಗದಂತೆ ಖುರ್ಬಾನಿಯನ್ನು (ಪ್ರಾಣಿ ಬಲಿದಾನ) ನೆರವೇರಿಸಬೇಕು. ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಖುರ್ಬಾನಿಯನ್ನು ನೆರವೇರಿಸುವಾಗ ಶುಚಿತ್ವ ಮತ್ತು ನೈರ್ಮಲ್ಯವನ್ನು ಕಡ್ಡಾಯವಾಗಿ ಕಾಪಾಡಿಕೊಳ್ಳಬೇಕು. ಖುರ್ಬಾನಿಯನ್ನು ಸಾರ್ವಜನಿಕ ಪ್ರದೇಶ, ರಸ್ತೆಗಳು, ಶಾಲಾ-ಕಾಲೇಜು, ಆಸ್ಪತ್ರೆ ಆವರಣ, ಉದ್ಯಾನವನ ಮತ್ತು ಇತರೆ ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿಸಲಾಗಿದೆ. ಪೊಲೀಸ್ ಇಲಾಖೆ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯವರು ನೀಡುವ ಸಾಮಾನ್ಯ ಮತ್ತು ಸ್ಥಳೀಯವಾಗಿ ನೀಡುವ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪ್ರಾಣಿ ತ್ಯಾಜ್ಯವನ್ನು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು ಎಂದು ಸರ್ಕಾರ ಸುತ್ತೋಲೆಯಲ್ಲಿ ಸೂಚಿಸಿದೆ.