ಶಿವಮೊಗ್ಗ : ಬಜರಂಗದಳದ ಕಾರ್ಯಕರ್ತನ ಮೇಲೆ ದಾಳಿಗೆ ಯತ್ನಿಸಿರುವ ಘಟನೆ ಜಿಲ್ಲೆಯ ಸಾಗರದ ಬಿ.ಎಚ್.ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಬಜರಂಗದಳ ಕಾರ್ಯಕರ್ತ ಸುನೀಲ್ ಎಂಬವರ ಮೇಲೆ ಸಮೀರ್ ಎಂಬಾತ ಮಚ್ಚು ಬೀಸಿದ್ದಾನೆ. ಆದರೆ ಸುನೀಲ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಈ ಎಲ್ಲಾ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ನಿನ್ನೆ ಶಿವಮೊಗ್ಗದಲ್ಲಿ ಶೋಭಾ ಯಾತ್ರೆ ನಡೆದಿತ್ತು. ಅದರಲ್ಲಿ ಸುನೀಲ್ ಭಾಗವಹಿಸಿದ್ದ. ಅದರ ಮರುದಿನವೇ ಈ ಹತ್ಯೆಯ ಪ್ರಯತ್ನ ನಡೆದಿದೆ.
ಇನ್ನೂ ಸುನೀಲ್ ಮೇಲೆ ದಾಳಿ ನಡೆಯುತ್ತಿದ್ದಂತೆಯೇ ಹಿಂದೂ ಸಂಘಟನೆಗಳು ಆರೋಪಿ ಸಮೀರ್ ನನ್ನು ಬಂಧಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿವೆ.










