ಕಲಬುರಗಿ : ಬರ್ತಡೇ ಪಾರ್ಟಿಯಲ್ಲಿ ತಲವಾರ್ ಹಿಡಿದು ನೃತ್ಯ ಮಾಡುತ್ತಿದ್ದ ಏಳು ಮಂದಿಯನ್ನು ಬಂಧಿಸಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ. ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಅನುಮತಿ ಪಡೆಯದೇ ಕೋವಿಡ್ ನಿಯಮವನ್ನು ಉಲ್ಲಂಘಿಸಿ ವೇದಿಕೆ ಹಾಕಿ ಬರ್ತಡೇ ಪಾರ್ಟಿ ಮಾಡುತ್ತಿದ್ದ ಯುವಕರನ್ನು ಪೊಲೀಸರು ಬಂಧಿಸಿದ್ದು, ಬಂಧಿತರನ್ನು ಅಪ್ರೋಜ್, ತಬ್ರೇಜ್, ಇಮ್ರಾನ್, ರಶೀದ್,ಸೊಹೆಲ್ ಮತ್ತು ಜಹೀಲ್ ಎಂದು ಗುರುತಿಸಲಾಗಿದೆ. ಕಲಬುರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










