ಬಳ್ಳಾರಿ ಜೈಲಿನಲ್ಲಿರೋ ದರ್ಶನ್‍ಗೆ ಹೆಚ್ಚಿದ ಬೆನ್ನು ನೋವಿನ ಸಮಸ್ಯೆ.

29

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತ್ಯವಾಗಿದೆ. ಚಾರ್ಜ್‍ಶೀಟ್ ಸಲ್ಲಿಕೆ ಆದ ಬಳಿಕ ಜಾಮೀನಿಗಾಗಿ ಅರ್ಜಿ ಸಲ್ಲಿಸಲಾಯಿತು. ಅವರಿಗೆ ಇನ್ನೂ ಜಾಮೀನು ಸಿಕ್ಕಿಲ್ಲ. ಹೀಗಿರುವಾಗಲೇ ದರ್ಶನ್‍ಗೆ ಬೆನ್ನು ನೋವು ಹೆಚ್ಚಾಗಿದೆ. ಇದರಿಂದ ವಿಮ್ಸ್ ಆಸ್ಪತ್ರೆಯ ವೈದ್ಯರು ಜೈಲಿನಲ್ಲೇ ದರ್ಶನ್ ಆರೋಗ್ಯ ತಪಾಸಣೆ ನಡೆಸಿದ್ದಾರೆ. ನಟ ದರ್ಶನ್ ಅವರಿಗೆ ಬಳ್ಳಾರಿ ಜೈಲಿನ ವಾತಾವರಣ ಹೊಂದುತ್ತಿಲ್ಲ. ಅವರು ನಿರಂತರವಾಗಿ ಸೊರಗುತ್ತಿದ್ದಾರೆ. ಜೈಲಿನ ಆವರಣದಲ್ಲಿ ಕಾಣಿಸಿಕೊಳ್ಳುವಾಗ ಫ್ಯಾನ್ಸ್ ಎದುರು ನಗುನಗುತ್ತಾ ಇರುವ ಅವರು ಒಳಗಿನಿಂದ ಸಾಕಷ್ಟು ನೋವು ಅನುಭವಿಸಿದ್ದಾರೆ ಎನ್ನಲಾಗಿದೆ. ರೇಣುಕಾ ಸ್ವಾಮಿ ಕೊಲೆ ಕೇಸ್‍ನ ಆರೋಪಿ ದರ್ಶನ್‍ಗೆ ಬೆನ್ನು ನೋವಿನ ಸಮಸ್ಯೆ ಕಾಡುತ್ತಿದೆ. ಇದರಿಂದ ಅವರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಬೆನ್ನು ನೋವು ಹೆಚ್ಚಾಗಿರುವುದರಿಂದ ವಿಮ್ಸ್ ಆಸ್ಪತ್ರೆಯ ವೈದ್ಯರು ಜೈಲಿನಲ್ಲೇ ದರ್ಶನ್ ಆರೋಗ್ಯ ತಪಾಸಣೆ ನಡೆಸಿದ್ದಾರೆ. ಈಗಾಗಲೇ ಬೆನ್ನಿನ ಹಿಂಭಾಗದಲ್ಲಿ ಊತ ಬಂದಿರುವ ಸಾಧ್ಯತೆ ಇದೆ. ಅವರಿಗೆ ಸರ್ಜರಿ ಮಾಡಿಸಲೇಬೇಕಾದ ಅಗತ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ದರ್ಶನ್‍ಗೆ ಸ್ಕ್ಯಾನ್ ಮಾಡಿಸಲು ವೈದ್ಯರು ಸೂಚನೆ ನೀಡಿದ್ದಾರೆ. ಆದರೆ, ದರ್ಶನ್ ಅವರು ಸ್ಕ್ಯಾನ್ ಮಾಡಿಸೋದಕ್ಕೆ ರೆಡಿ ಇಲ್ಲ. ‘ನಾನು ಬೆಂಗಳೂರಿಗೆ ಹೋದ್ಮೇಲೆ ಸ್ಕ್ಯಾನ್ ಮಾಡಿಸ್ತೀನಿ. ಸದ್ಯಕ್ಕೆ ನೋವು ನಿವಾರಕ ಮಾತ್ರೆ ಕೊಡಿ ಸಾಕು’ ಎಂದು ದರ್ಶನ್ ಕೋರಿಕೊಂಡಿದ್ದಾರೆ ಎಂದು ವರದಿ ಆಗಿದೆ. ದರ್ಶನ್ ಅವರು ಈಗಾಗಲೇ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಶುಕ್ರವಾರ (ಅಕ್ಟೋಬರ್ 4) ಅರ್ಜಿ ವಿಚಾರಣೆ ನಡೆಯಲಿದೆ. ದರ್ಶನ್ ಅವರು ಜಾಮೀನು ಸಿಕ್ಕೇ ಸಿಗುತ್ತದೆ ಎನ್ನುವ ಭರವಸೆಯಲ್ಲಿ ಇದ್ದಾರೆ. ಈ ವಿಚಾರದಲ್ಲಿ ಕೋರ್ಟ್ ಯಾವ ರೀತಿಯ ಆದೇಶ ಹೊರಡಿಸುತ್ತದೆ ಎಂದು ಕಾದು ನೋಡಬೇಕಿದೆ. ಜಾಮೀನು ಅರ್ಜಿ ವಿಚಾರಣೆ ಈಗಾಗಲೇ ಎರಡು ಬಾರಿ ಮುಂದಕ್ಕೆ ಹೋಗಿದೆ. ದರ್ಶನ್ ಪರ ವಕೀಲರು ವಾದ ಮಂಡನೆಗೆ ಹೆಚ್ಚಿನ ಸಮಯ ಕೇಳುತ್ತಿದ್ದಾರೆ. ಈ ಕಾರಣದಿಂದ ಅರ್ಜಿ ವಿಚಾರಣೆ ಮುಂದಕ್ಕೆ ಹೋಗುತ್ತಿದೆ.