ಬಸವರಾಜ್ ಬೊಮ್ಮಾಯಿಗೆ ಸಿಎಂ ಪಟ್ಟ ; ಕೆಲವೇ ಕ್ಷಣಗಳಲ್ಲಿ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ…

85
firstsuddi

ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅವರು ಇಂದು ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿಯವರ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಆರಂಭವಾಗಿದ್ದು, ರಾಜಭವನದ ಗಾಜಿನ ಮನೆಯೊಳಗೆ ಪದಗ್ರಹಣಕ್ಕೆ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ರಾಜಭವನದಲ್ಲಿ ಅವರ ಪತ್ನಿ ಚೆನ್ನಮ್ಮ, ಪುತ್ರ ಭರತ್, ಪುತ್ರಿ ಆದಿತಿ ಆಗಮಿಸಿದ್ದಾರೆ.

ರಾಜಭವನದಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬೊಮ್ಮಾಯಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.

ಸಿಎಂ ಆಗಿ ಇಂದು ಬೊಮ್ಮಾಯಿ ಪ್ರಮಾಣವಚನ ಹಿನ್ನೆಲೆ ರಾಜಭವನದ ಬಳಿ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಬಿಗಿಭದ್ರತೆ ಕೈಗೊಳ್ಳಲಾಗಿದ್ದು, ಡಿಸಿಪಿ, ಎಸಿಪಿ ಸೇರಿ 500ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.