ಬಸವರಾಜ ಹೊರಟ್ಟಿ ವಿರುದ್ಧ ಎಫ್‍ಐಆರ್ ದಾಖಲು ಪ್ರಕರಣ – ಇನ್ಸ್‌ಪೆಕ್ಟರ್‌ ಅಮಾನತು…

67
firstsuddi

ಧಾರವಾಡ : ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧ ಎಫ್ಐಆರ್ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಗ್ರಾಮೀಣ ಠಾಣೆಯ ಇನ್ಸ್ ಪೆಕ್ಟರ್ ನನ್ನು ಅಮಾನತು ಮಾಡಲಾಗಿದೆ.

ಶ್ರೀಧರ ಸತಾರೆ ಅಮಾನತು ಆದ ಇನ್ಸ್‌ಪೆಕ್ಟರ್‌. ಸರ್ವೋದಯ ಶಿಕ್ಷಣ ಸಂಸ್ಥೆ ಹಾಗೂ ವಾಲ್ಮೀಕಿ ಮಹಾಸಭಾ ನಡುವೆ ವಿವಾದಕ್ಕೆ ಸಂಬಂಧಿಸಿದಂತೆ ಮುಗದ ಗ್ರಾಮದಲ್ಲಿ ಗಲಾಟೆಯೊಂದು ನಡೆದಿತ್ತು. ಈ ಸಂಬಂಧ ಮೋಹನ್ ಗುಡಸಲಮನಿ ಎನ್ನುವವರು ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸರ್ವೋದಯ ಶಿಕ್ಷಣ ಸಂಸ್ಥೆಯ ಶಿಕ್ಷಕರ ಜೊತೆ ಹೊರಟ್ಟಿಯವರನ್ನು 5ನೇ ಆರೋಪಿಯನ್ನಾಗಿ ಮಾಡಿ ಜನವರಿ 25 ರಂದು ಸತಾರೆ ಪ್ರಕರಣ ದಾಖಲಿಸಿಕೊಂಡಿದ್ದರು. 

ಸಭಾಪತಿ ವಿರುದ್ಧ ಕೇಸ್ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಎರಡು ದಿನಗಳ ಹಿಂದೆ ಮೇಲ್ಮನೆಯಲ್ಲಿ ಸರ್ಕಾರದ ವಿರುದ್ಧ ತೀವ್ರ ಟೀಕೆ ಕೇಳಿಬಂದಿತ್ತು. ಎಸ್ ಪಿ ಹಾಗೂ ಇನ್ಸ್‌ಪೆಕ್ಟರ್‌ ಮೇಲೆ ಕ್ರಮಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಆಗ್ರಹಿಸಿದ್ದರು. ಆ ಬಳಿಕ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆ ಇದೀಗ ಹೊರಟ್ಟಿ ವಿರುದ್ಧ ಪ್ರಕರಣ ದಾಖಲು ಮಾಡಿದ ಇನ್ಸ್‌ಪೆಕ್ಟರ್‌ ಶ್ರೀಧರ ಸತಾರೆಯನ್ನು ಅಮಾನತುಗೊಳಿಸಿ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.