ಬಸ್​ಗೆ ಟ್ರಕ್ ಡಿಕ್ಕಿಯಾಗಿ 6 ಸಾವು, 20 ಮಂದಿಗೆ ಗಾಯ…

50
firstsuddi

ಭುವನೇಶ್ವರ : ಬಸ್‍ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಒಡಿಶಾದ ಜಾರ್ಸುಗುಡ-ಸಂಬಲ್‌ಪುರ್ ಬಿಜು ಎಕ್ಸ್ ಪ್ರೆಸ್ ವೇಯಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಕಾರ್ಮಿಕರು ಪ್ಲಾಂಟ್ ಸೈಟ್ ನಿಂದ ಜಾರ್ಸುಗುಡ ಪಟ್ಟಣಕ್ಕೆ ಬಸ್ ನಲ್ಲಿ ಹಿಂತಿರುಗುತ್ತಿದ್ದರು. ಈ ವೇಳೆ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಹಲವಾರು ನೌಕರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಗೊಂಡ ಕಾರ್ಮಿಕರನ್ನು ಬುರ್ಲಾದಲ್ಲಿರುವ ವೀರ್ ಸುರೇಂದ್ರ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ (ವಿಮ್ಸಾರ್) ಗೆ ಸ್ಥಳಾಂತರಿಸಲಾಗಿದೆ ಎಂದು ಝಾರ್ಸುಗುಡಾ ಉಪ ಪೊಲೀಸ್ ವರಿಷ್ಠಾಧಿಕಾರಿ ಎನ್.ಮಹಾಪಾತ್ರ ತಿಳಿಸಿದ್ದಾರೆ. ಕೆಲ ಕಾರ್ಮಿಕರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.