ಚಾಮರಾಜನಗರ : ಬಸ್ ಹಾಗೂ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಗುಂಡ್ಲುಪೇಟೆಯ ಎಪಿಎಂಸಿ ಸಮೀಪ ನಡೆದಿದೆ.
ಟಿಪ್ಪರ್ ಚಾಲಕನ ಅಜಾಗರೂಕ ಚಾಲನೆಯೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಘಟನೆಯಿಂದಾಗಿ ಬಸ್ಸಿನ ಕಿಟಕಿ, ಗಾಜುಗಳು ಪುಡಿಯಾಗಿದೆ. ಅಪಘಾತದ ರಭಸಕ್ಕೆ ಸುಮಾರು 5ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯಗಳಾಗಿವೆ. ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.
ಗಾಯಾಳುಗಳನ್ನು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆ ಕುರಿತಾಗಿ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










