ಬಸ್-ಟ್ರಕ್ ಮುಖಾಮುಖಿ ಡಿಕ್ಕಿ- ನಾಲ್ವರು ಸಾವು…

63
firstsuddi

ಭೋಪಾಲ್: ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯ ಮಕ್ಸಿ ಪಟ್ಟಣದ ಬಳಿ ವೇಗವಾಗಿ ಬಂದ ಬಸ್, ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.

ಹಲವು ಪ್ರಯಾಣಿಕರನ್ನು ಒಳಗೊಂಡ ಬಸ್ ಅಹಮದಾಬಾದ್‌ಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ ಎಂದು ಮಕ್ಸಿ ಪೊಲೀಸ್ ಠಾಣೆಯ ಉಸ್ತುವಾರಿ ಗೋಪಾಲ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ತುರ್ತು ಚಿಕಿತ್ಸಾ ದಳ ಆಗಮಿಸಿ ಗಾಯಾಳುಗಳಿಗೆ ನೆರವು ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಉಜ್ಜಯಿನಿಯ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಕುರಿತು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.