ತೆಲಂಗಾಣ : ಬಸ್, ಲಾರಿ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ಮೊಮಿನ್ಪೇಟೆ ಮಂಡಲ್ನ ಚಿತ್ತಂಪಲ್ಲಿ ಎಂಬ ಗ್ರಾಮದಲ್ಲಿ ನಡೆದಿದೆ. ಇಂದು ಮುಂಜಾನೆ ಬಸ್, ಲಾರಿ ಹಾಗೂ ಆಟೋ ಒಂದಕ್ಕೊಂದು ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ. ಅವರನ್ನು ಸಂಗರೆಡ್ಡಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










