ಗಾಂಧಿನಗರ : ಬಾಂಬ್ ಬೆದರಿಕೆ ಹಿನ್ನೆಲೆ ಮಾಸ್ಕೋದಿಂದ ಗೋವಾಕ್ಕೆ ತೆರಳುತ್ತಿದ್ದ ವಿಮಾನವನ್ನು ಜಾಮ್ ನಗರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.
ಗೋವಾ ಎಟಿಸಿಗೆ ಬಾಂಬ್ ಬೆದರಿಕೆ ಮೇಲ್ ಬಂದಿತ್ತು. ಮಾಸ್ಕೋ-ಗೋವಾ ಫ್ಲೈಟ್ ನಲ್ಲಿದ್ದ ಎಲ್ಲಾ 244 ಪ್ರಯಾಣಿಕರನ್ನು ರಾತ್ರಿ 9.49ರ ಸುಮಾರಿಗೆ ಜಾಮ್ ನಗರ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ಪೊಲೀಸ್ ಹಿರಿಯ ಅಧಿಕಾರಿಯೊಂದಿಗೆ ಬಾಂಬ್ ನಿಷ್ಕ್ರಿಯ ದಳ ಕೂಡಾ ಜಾಮ್ ನಗರದ ವಿಮಾನ ನಿಲ್ದಾಣಕ್ಕೆ ತಲುಪಿ, ವಿಮಾನವನ್ನು ಪರೀಶೋಧನೆ ಮಾಡಲಾಗುತ್ತಿದೆ.










