ಬೆಂಗಳೂರು: ಕಿರುತೆರೆ ನಟನೊಬ್ಬ ಬಾರ್ನಲ್ಲಿ ಕುಡಿದು ಕಿರಿಕ್ ಮಾಡಿಕೊಂಡಿದ್ದಾರೆ. ಇವರ ವಿರುದ್ಧ ನಗರದ ಆರ್ಆರ್ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಪ್ರಜ್ವಲ್ ಎಂಬ ನಟನ ವಿರುದ್ಧ ಎಫ್ಐಆರ್ ದಾಖಲಾಗಿದೆ. ‘ಅಮೃತವರ್ಷಿಣಿ’ ಹಾಗೂ ‘ಅಣ್ಣ ತಂಗಿ’ ಧಾರಾವಾಹಿ ಮೂಲಕ ಪ್ರಜ್ವಲ್ ಖ್ಯಾತಿ ಪಡೆದಿದ್ದಾರೆ. ಮೂರು ದಿನದ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಚೇತನ್ ಎಂಬುವರ ಜೊತೆ ಪ್ರಜ್ವಲ್ ಬಾರ್ನಲ್ಲಿ ಕಿರಿಕ್ ಮಾಡಿಕೊಂಡಿದ್ದಾರೆ.
ಆರ್ಆರ್ ನಗರದ ‘ಅಮೃತ ಬಾರ್ ಆ್ಯಂಡ್ ರೆಸ್ಟೋರೆಂಟ್’ನಲ್ಲಿ ಈ ಗಲಾಟೆ ನಡೆದಿದೆ. ಪ್ರಜ್ವಲ್ ತಮ್ಮ ಸ್ನೇಹಿತರ ಜೊತೆ ಅಮೃತ ಬಾರ್ಗೆ ಹೋಗಿದ್ದರು. ಇದೇ ಬಾರ್ಗೆ ಚೇತನ್ ಕೂಡ ತನ್ನ ಸ್ನೇಹಿತರ ಜೊತೆ ಬಂದಿದ್ದರು. ಈ ವೇಳೆ ಪ್ರಜ್ವಲ್ನ ಸ್ನೇಹಿತ ಮನು ಎಂಬುವವರನ್ನು ಚೇತನ್ ಕರೆದಿದ್ದಾರೆ. ಇದರಿಂದ ಅಲ್ಲಿಯೇ ಇದ್ದ ಪ್ರಜ್ವಲ್ ಅವರು ಚೇತನ್ ಮೇಲೆ ಹಲ್ಲೆ ಮಾಡಿದ್ದಾರೆ.
ಮರದ ಪೀಸ್ನಿಂದ ಚೇತನ್ ಹಾಗೂ ಸ್ನೇಹಿತರ ಮೇಲೆ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪವನ್ನು ಚೇತನ್ ಮಾಡಿದ್ದಾರೆ. ಬಾರ್ನಲ್ಲಿ ಅಷ್ಟೇ ಅಲ್ಲದೆ ರಸ್ತೆಯಲ್ಲಿ ಈ ಗುಂಪು ಮತ್ತೆ ಗಲಾಟೆ ಮಾಡಿಕೊಂಡಿದೆ. ಅಮೃತ ಬಾರ್ನಲ್ಲಿ ಗಲಾಟೆ ಆದ ಬಳಿಕ ಚೇತನ್ ಸ್ನೇಹಿತರ ಮೇಲೆ, ಪ್ರಜ್ವಲ್ ಮತ್ತೆ ಹಲ್ಲೆ ಮಾಡಿದ್ದಾಗಿ ಆರೋಪಿಸಿ ದೂರು ದಾಖಲಾಗಿದೆ.
ಚೇತನ್ ನೀಡಿದ ದೂರಿನನ್ವಯ ಎಫ್ಐಆರ್ ದಾಖಲು ಮಾಡಿಕೊಂಡು ಪೊಲೀಸರು ನೋಟಿಸ್ ನೀಡಿದ್ದಾರೆ. ಇದರ ಜೊತೆಗೆ ಬಾರ್ನ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಸಹ ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.










