ಬಾಲಕ ಸಾತ್ವಿಕ್ ಯಶಸ್ವಿ ರಕ್ಷಣಾ ಕಾರ್ಯಾಚರಣೆ: ಅಭಿನಂದನೆ ತಿಳಿಸಿದ ಸಿದ್ದರಾಮಯ್ಯ.

31
firstsuddi

ಬೆಂಗಳೂರು: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆಬಾವಿಗೆ ಬಿದಿದ್ದ ಮಗು ಸಾತ್ವಿಕ 20 ಗಂಟೆ ಅನ್ನ, ನೀರು, ಗಾಳಿ-ಬೆಳಕು ಇಲ್ಲದೇ ಪವಾಡ ಸದೃಶ್ಯವೆಂಬಂತೆ ಬದುಕಿ ಬಂದಿದ್ದಾನೆ. ಆ ಮೂಲಕ ನಾಡಿನ ಕೋಟ್ಯಂತರ ಜನರ ಹರಕೆ, ಹಾರೈಕೆಗಳು ಫಲಿಸಿವೆ. ವೈದ್ಯರು ಕೂಡ ಸಾತ್ವಿಕ್​ಗೆ ಚಿಕಿತ್ಸೆ ನೀಡಿದ್ದು, ನಾರ್ಮಲ್ ಆಗಿದ್ದಾನೆ, ಯಾವುದೇ ಗಾಯವಾಗಿಲ್ಲ ಎಂದು ಹೇಳಿದ್ದಾರೆ. ಇತ್ತ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಸಾತ್ವಿಕ್​ನನ್ನ ಕಾಪಾಡಿದ ರಕ್ಷಣಾ ತಂಡಕ್ಕೆ ಅಭಿನಂದನೆ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ, ಮಗುವಿನ ಕುಟುಂಬದವರ, ನಾಡಿನ ಕೋಟ್ಯಂತರ ಜನರ ಹರಕೆ – ಹಾರೈಕೆಗಳು ಫಲಿಸಿದೆ, ಸಾವನ್ನೇ ಗೆದ್ದು ಬಂದ ಪುಟ್ಟ ಕಂದಮ್ಮ ಮತ್ತೆ ಪೋಷಕರ ಮಡಿಲು ಸೇರಿದ್ದು ಕಂಡು ಖುಷಿಯಾಯಿತು ಎಂದಿದ್ದಾರೆ.

ನೀರು ಬಾರದ ಅಥವಾ ಬತ್ತಿದ ಕೊಳವೆ ಬಾವಿಗಳನ್ನು ಮುಚ್ಚದಿದ್ದರೆ ಯಾರದೋ ಅಮಾಯಕ ಜೀವ ಬಲಿಯಾಗುತ್ತದೆ, ಇಂತಹ ಘಟನೆಗಳು ಕಾಲಕಾಲಕ್ಕೆ ಪುನರಾವರ್ತನೆಯಾಗುತ್ತಿದ್ದರೂ ಜನ ಜಾಗೃತರಾಗದೆ ನಿರ್ಲಕ್ಷ್ಯ ತೋರುವುದು ಬೇಸರದ ಸಂಗತಿ. ಸಮಾಜ ಈ ಬಗ್ಗೆ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು ಎಂದು ಜನರಿಗೆ ಸೂಚನೆ ನೀಡಿದ್ದಾರೆ.