ಮುಂಬೈ : ಬಾಲಿವುಡ್ ನ ಖ್ಯಾತ ನಟ ಅಕ್ಷಯ್ ಕುಮಾರ್ ತಾಯಿ ಅರುಣಾ ಭಾಟಿಯಾ ನಿಧನರಾಗಿದ್ದಾರೆ.
ಮುಂಬೈನ ಹಿರಾನಂದನಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅರುಣಾ ಭಾಟಿಯಾ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಅರುಣಾ ಭಾಟಿಯಾ ನಿಧನಕ್ಕೆ ಇನ್ನೂ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ.
ತಾಯಿ ನಿಧನದ ಸುದ್ದಿಯನ್ನು ಸ್ವತಃ ನಟ ಅಕ್ಷಯ್ ಕುಮಾರ್ ಅವರೇ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. ನನ್ನ ತಾಯಿಯೇ ನನ್ನ ಸರ್ವಸ್ವ. ಇಂದು ಅವರನ್ನು ಕಳೆದುಕೊಂಡು ನಾನು ಅಸಹನೀಯ ನೋವನ್ನು ಅನುಭವಿಸುತ್ತಿದ್ದೇನೆ. ನನ್ನ ಅಮ್ಮ ಇಂದು ಬೆಳಗ್ಗೆ ಜಗತ್ತನ್ನು ತೊರೆದಿದ್ದಾರೆ. ನನ್ನ ತಂದೆಯೊಂದಿಗೆ ಬೇರೆ ಜಗತ್ತಿನಲ್ಲಿ ಜೊತೆಯಾಗಿದ್ದಾರೆ’ ನನ್ನ ತಾಯಿ ಗುಣಮುಖರಾಗಲೆಂದು ಬಯಸಿದ ನಿಮ್ಮ ಪ್ರಾರ್ಥನೆಯನ್ನು ನಾನು ಮತ್ತು ನನ್ನ ಕುಟುಂಬದವರು ಹೃದಯಪೂರ್ವಕವಾಗಿ ಗೌರವಿಸುತ್ತೇವೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.










