ಬಾಲ್ಯ ವಿವಾಹಗಳ ವಿರುದ್ಧ ವಿಶೇಷ ಕಾರ್ಯಾಚರಣೆ- 800 ಕ್ಕೂ ಹೆಚ್ಚು ಆರೋಪಿಗಳ ಬಂಧನ…

50
firstsuddi

ಗುವಾಹಟಿ: ಅಸ್ಸಾಂನಲ್ಲಿ ಬಾಲ್ಯ ವಿವಾಹಗಳ ವಿರುದ್ಧ ರಾಜ್ಯಾದ್ಯಂತ ನಡೆಯುತ್ತಿರುವ ಎರಡನೇ ಹಂತದ ಕಾರ್ಯಾಚರಣೆಯಲ್ಲಿ ಇಂದು 800ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ (X) ಪೋಸ್ಟ್ ಮಾಡಿರುವ ಹಿಮಂತ ಬಿಸ್ವಾ ಶರ್ಮಾ, ಈ ವರ್ಷದ ಆರಂಭದಲ್ಲಿ ಮೊದಲ ಸುತ್ತಿನ ಕಾರ್ಯಾಚರಣೆಯಲ್ಲಿ ರಾಜ್ಯಾದ್ಯಂತ ಸಾವಿರಾರು ಮಂದಿಯನ್ನು ಬಂಧಿಸಲಾಯಿತು. ಕಾರ್ಯಾಚರಣೆ ಇನ್ನೂ ನಡೆಯುತ್ತಿರುವುದರಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣಗಳಲ್ಲಿ ಬಂಧಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಿದರು.

ಕಳೆದ ಐದು ವರ್ಷಗಳಲ್ಲಿ ಬಾಲ್ಯವಿವಾಹಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಒಟ್ಟು 3,907 ಜನರನ್ನು ಬಂಧಿಸಲಾಗಿದೆ. ಅವರಲ್ಲಿ 3,319 ಜನರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ 2012ರ (ಪಿಒಸಿಎಸ್‍ಒ) ಅಡಿಯಲ್ಲಿ ಆರೋಪಗಳನ್ನು ಎದುರಿಸುತ್ತಿದ್ದಾರೆ ಎಂದು ಸೆಪ್ಟೆಂಬರ್ 11 ರಂದು ಅಸ್ಸಾಂ ವಿಧಾನಸಭೆಗೆ ಶರ್ಮಾ ತಿಳಿಸಿದ್ದರು.

ಬಾಲ್ಯವಿವಾಹದ ಪದ್ದತಿಯನ್ನು ನಿಯಂತ್ರಿಸಲು ರಾಜಸ್ಥಾನ್, ಗುಜರಾತ್, ಮಹಾರಾಷ್ಟ್ರ, ಆಂಧ್ರ ಪ್ರದೇಶ, ಬಿಹಾರ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳು ಮದುವೆಯ ಗಂಡು ಹೆಣ್ಣಿನ ವಯಸ್ಸುಗಳನ್ನು ದೃಢ ಪಡಿಸಲು ಮತ್ತು ನ್ಯಾಯಬದ್ಧಗೊಳಿಸಲು ವಿವಾಹವನ್ನು ನೊಂದಣಿ ಮಾಡಿಸುವುದನ್ನು ಕಡ್ಡಾಯ ಮಾಡಿದ್ದಾರೆ.