ಬಿಎಂಟಿಸಿ ಬಸ್‌ನಲ್ಲೇ ಹೃದಯಾಘಾತದಿಂದ ವ್ಯಕ್ತಿ ಸಾವು…

47
firstsuddi

ಬೆಂಗಳೂರು: ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 60ರ ವೃದ್ಧರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಕೃಷ್ಣ (60) ಎಂದು ಗುರುತಿಸಲಾಗಿದೆ. ವ್ಯಕ್ತಿ ಬಸ್‌ನಲ್ಲಿ ಟಿಕೆಟ್ ಪಡೆದು ಕುಳಿತಿದ್ದ 15 ನಿಮಿಷಗಳಲ್ಲೇ ಹೃದಯಾಘಾತ ಸಂಭವಿಸಿ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಮೆಜೆಸ್ಟಿಕ್‌ನಲ್ಲಿ ಬಸ್ ಹತ್ತಿದ್ದ ಮೃತ ವ್ಯಕ್ತಿ, ರಾಜಾಜೀನಗರದ ನವರಂಗ್ ವೃತ್ತದ ಬಳಿ ಬರುತ್ತಿದ್ದ ವೇಳೆ ಸಾವು ಸಂಭವಿಸಿದೆ. ಕೂಡಲೇ ಆತನನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ ಚಿಕಿತ್ಸೆ ಕೊಡಿಸುವಷ್ಟರಲ್ಲಿ ವ್ಯಕ್ತಿ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ.