ಬೆಂಗಳೂರು: ನಿಂತಿದ್ದ ಬಿಎಂಟಿಸಿ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ, ಕಾರು ಹೊತ್ತಿ ಉರಿದ ಘಟನೆ ನಾಯಂಡಹಳ್ಳಿ ಬಳಿಯ ರಿಂಗ್ ರಸ್ತೆಯಲ್ಲಿ ನಡೆದಿದೆ.
ನಿಂತಿದ್ದ ಬಿಎಂಟಿಸಿ ಬಸ್ಗೆ ವೇಗವಾಗಿ ಬಂದ I20 ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ಪರಿಣಾಮ ನಡುರಸ್ತೆಯಲ್ಲೇ ಬೆಂಕಿ ಹತ್ತಿಕೊಂಡಿದ್ದು ಕಾರು ಸುಟ್ಟು ಕರಕಲಾಗಿದೆ. ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಕಿ ಹೊತ್ತಿಕೊಂಡ ತಕ್ಷಣವೇ ಸಮಯ ಪ್ರಜ್ಞೆ ಸಾಧಿಸಿದ ಬಸ್ ಚಾಲಕ, ಧಗಧಗನೆ ಹೊತ್ತಿ ಉರಿಯುತ್ತಿದ್ದ ಕಾರು ನಿಂತಿದ್ದ ಸ್ಥಳದಿಂದ ಬಸ್ ನ್ನು ಚಲಾಯಿಸಿಕೊಂಡು ಹೋಗಿದ್ದು, ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರಗೆ ಇಳಿಸಿದ್ದಾಗಿ ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ಸುದ್ದಿಗಾರರಿಗೆ ತಿಳಿಸಿದ್ದಾರೆ. ಈ ಘಟನೆ ನಡೆದಾಗ ಬಸ್‌ನಲ್ಲಿ ಅನೇಕ ಪ್ರಯಾಣಿಕರಿದ್ದರು ಎನ್ನಲಾಗಿದೆ.