ಬೆಂಗಳೂರು : ಬಿಎಂಟಿಸಿ ಬಸ್ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ 7:45ರ ಸುಮಾರಿಗೆ ಪೀಣ್ಯದ 14ನೇ ಕ್ರಾಸ್ ನಲ್ಲಿ ನಡೆದಿದೆ.
ದೀಪಕ್ (30) ಮೃತ ದುರ್ದೈವಿ. ದೀಪಕ್ ಮೂಲತಃ ವಾರಣಾಸಿಯವಾನಾಗಿದ್ದು, ಕಳೆದ ಮೂರು ತಿಂಗಳ ಹಿಂದಷ್ಟೇ ಬೆಂಗಳೂರಿಗೆ ಬಂದಿದ್ದ. ಎಸ್ಎಸ್ ಫ್ಯಾಬ್ ಕಂಪನಿಯಲ್ಲಿ ಆಪರೇಟರ್ ಆಗಿ ಕೆಲಸ ಮಾಡುತಿದ್ದ. ಕೆಲಸ ಮುಗಿಸಿ ಮನೆಗೆ ತೆರಳುವಾಗ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಬಸ್ನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆ.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೀಣ್ಯ ಸಂಚಾರಿ ಪೊಲೀಸರು ಬಸ್ ಚಾಲಕನನ್ನು ವಶಕ್ಕೆ ಪಡದು ವಿಚಾರಣೆ ನಡೆಸುತ್ತಿದ್ದಾರೆ.










