ಬೆಂಗಳೂರು : ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆ ಏಪ್ರಿಲ್ 16 ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪನವರು ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾದಿಂದ ಗುಣಮುಖರಾದ ಕಾರಣ ಸಿಎಂ ಯಡಿಯೂರಪ್ಪನವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಿರುವುದಾಗಿ ವೈದ್ಯರು ತಿಳಿಸಿದ್ದಾರೆ.










