ಬಿಗ್ ಬಾಸ್ ಮನೆಯಲ್ಲಿ ನುಡಿದ ಮಾತಿನಂತೆ ಬಡವರಿಗೆ ಆಹಾರ ಕಿಟ್ ನೀಡಿದ ಶುಭಾ ಪೂಂಜಾ.!

187
firstsuddi

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಉಲ್ಬಣಗೊಳ್ಳುತ್ತಿದ್ದು, ಕೊರೊನಾದಿಂದ ಏನೆಲ್ಲಾ ಸಮಸ್ಯೆ ಆಗುತ್ತಿದೆ ಎಂಬ ವಿಚಾರಗಳನ್ನು ಬಿಗ್ ಬಾಸ್ ಮನೆಯಲ್ಲಿ ಪ್ರಸಾರ ಮಾಡಲಾಗಿತ್ತು. ಕೊರೊನಾ ಹಾವಳಿಯಿಂದ ಇಡೀ ದೇಶವೇ ತತ್ತರಿಸುವುದನ್ನು ಕಂಡು ಬಿಗ್ ಬಾಸ್ ಸ್ಪರ್ಧಿಗಳು ಕಣ್ಣೀರು ಹಾಕಿದರು. ಈ ವೇಳೆ ನಟಿ ಶುಭಾ ಪೂಂಜಾ ಅವರು ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡಲು ನಿರ್ಧರಿಸಿರುವುದಾಗಿ ಮಾತು ಕೊಟಿದ್ದರು.

ಇದೀಗ ನುಡಿದ ಮಾತಿನಂತೆ ಶುಭಾ ನಡೆದುಕೊಂಡಿದ್ದಾರೆ. ಲಾಕ್ ಡೌನ್ ನಿಂದಾಗಿ ಕೂಲಿ ಕಾರ್ಮಿಕರು ಕೆಲಸವಿಲ್ಲದೇ ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಅಂಥವರಿಗೆ ಶುಭಾ ಪೂಂಜಾ, ಆಹಾರ ಧಾನ್ಯದ ಕಿಟ್ ಗಳನ್ನು ವಿತರಿಸುವ ಮೂಲಕ ಬಡವರ ಹಸಿವನ್ನು ನೀಗಿಸುತ್ತಿದ್ದಾರೆ. ಅಲ್ಲದೆ ಆಹಾರ ಕಿಟ್ ವಿತರಿಸುತ್ತಿರುವ ಕೆಲವೊಂದು ಫೋಟೋಗಳನ್ನು ಫೇಸ್ ಬುಕ್ ನಲ್ಲಿ ಶೇರ್ ಮಾಡಿಕೊಂಡು, ನನ್ನ ಮನೆಯ ಸಮೀಪದವರಿಗೆ ಆಹಾರ ಕಿಟ್ ವಿತರಿಸಿದ್ದೇನೆ. ಮುಂದಿನ ದಿನದಲ್ಲಿ ಇನ್ನೂ ಒಂದಷ್ಟು ಜನಗಳಿಗೆ ತಲುಪುವ ಪ್ರಯತ್ನವನ್ನು ಮಾಡುತ್ತೇನೆ ಎಂದು ಬರೆದುಕೊಂಡಿದ್ದಾರೆ. ಶುಭಾ ಪೂಂಜಾ ಅವರ ಈ ಒಳ್ಳೆ ಕೆಲಸಕ್ಕೆ ಅಭಿಮಾನಿಗಳು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.