ಬಿಜೆಪಿಗೆ ಮೋಹನ್ ಲಿಂಬಿಕಾಯಿ ಗುಡ್ ಬೈ…

63
firstsuddi

ಬೆಂಗಳೂರು: ರಾಜ್ಯ ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಆಪ್ತ ಮೋಹನ್ ಲಿಂಬಿಕಾಯಿ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಇಂದು ಸಂಜೆಯೇ ಅವರು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ.

ಇಂದು ಬೆಳಗ್ಗೆ ಸಹಾಯಕರ ಮೂಲಕ ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಕಚೇರಿಗೆ ರಾಜೀನಾಮೆ ಪತ್ರ ತಲುಪಿಸಿದ ಲಿಂಬಿಕಾಯಿ, ಇಂದು ಸಂಜೆ 4.30ಕ್ಕೆ ಬೆಳಗಾವಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಬಿಜೆಪಿ ತ್ಯಜಿಸಿ ಕೆಜೆಪಿ ಕಟ್ಟಿದಾಗ ಮೊದಲನೆಯದಾಗಿ ರಾಜೀನಾಮೆ ಸಲ್ಲಿಸಿದ್ದು ಮೋಹನ್ ಲಿಂಬಿಕಾಯಿ ಅವರಾಗಿದ್ದರು. ಅಂದು ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿ ಬಿಎಸ್​ವೈ ಹಿಂದೆ ಸಾಗಿದ್ದರು. ಹುಬ್ಬಳ್ಳಿ – ಧಾರವಾಡ ಪಶ್ಚಿಮ ಕ್ಷೇತ್ರದಿಂದ ಕೆಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಸೋತಿದ್ದರು. ಯಡಿಯೂರಪ್ಪ ಪಕ್ಷಕ್ಕೆ ಮರಳಿದ ನಂತರ ಅವರ ಹಿಂದೆಯೇ ಲಿಂಬಿಕಾಯಿ ಕೂಡ ಬಿಜೆಪಿಗೆ ವಾಪಸ್ ಆಗಿದ್ದರು. 2019ರಲ್ಲಿ ಯಡಿಯೂರಪ್ಪ ಸಿಎಂ ಆಗಿದ್ದ ವೇಳೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ಕೆಲಸ ಮಾಡಿದ್ದರು.

ಇದೀಗ ಬಿಜೆಪಿಗೆ ಗುಡ್ ಬೈ ಹೇಳಿರುವ ಲಿಂಬಿಕಾಯಿ, ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ. ಈಗಾಗಲೇ ಕಾಂಗ್ರೆಸ್ ಸೇರ್ಪಡೆಯಾಗಲು ಎರಡು ಸುತ್ತಿನ ಮಾತುಕತೆ ನಡೆದಿದೆ. ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದಿಂದ ಟಿಕೆಟ್ ಫೈನಲ್ ಮಾಡಲಾಗಿದೆ. ಆ ಆಶ್ವಾಶನೆ ಮೇಲೆ ಅವರು ಕಾಂಗ್ರೆಸ್ ಸೇರುತ್ತಿದ್ದಾರೆ ಎನ್ನಲಾಗಿದೆ.