ಬೆಳಗಾವಿ : ಬಿಜೆಪಿಯ ಹಲವು ನಾಯಕರು ಕಾಂಗ್ರೆಸ್ ಸೇರುತ್ತಾರೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಕೆಲವು ನಾಯಕರು ಈಗಾಗಲೇ ಕಾಂಗ್ರೆಸ್ ಸೇರ್ಪಡೆಗೊಳ್ಳಲು ಮುಂದಾಗಿದ್ದಾರೆ. ಕೆಲವು ನಾಯಕರು ಹೈಕಮಾಂಡ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಆಯಾ ಕ್ಷೇತ್ರದ ಬೆಳವಣಿಗೆಯನ್ನು ಗಮನಿಸಿ ಬಳಿಕ ಪಕ್ಷ ಸೇರಿಕೊಳ್ಳುವ ಚಿಂತನೆ ನಡೆಸಿದ್ದಾರೆ. ಬಿಜೆಪಿಯಿಂದ ಉಪಚುನಾವಣೆಯಲ್ಲಿ ಟಿಕೆಟ್ ಸಿಗದವರು ಕಾಂಗ್ರೆಸ್ ಸೇರುತ್ತಾರೆ. ಕಾಂಗ್ರೆಸ್‍ಗೆ ಬಂದವರಿಗೆ ಹೈಕಮಾಂಡ್ ಟಿಕೆಟ್ ಕೊಡಬಹುದು ಎಂದರು.










