ಬಿಜೆಪಿ ಅಭ್ಯರ್ಥಿಯಾಗಲು ಪೊಲೀಸ್ ಹುದ್ದೆಗೆ ರಾಜೀನಾಮೆ ನೀಡಿದ ಸಿಪಿಐ ಮಹೇಂದ್ರ ನಾಯಕ್.

49
firstsuddi

ವಿಜಯಪುರ : ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಲು ಸಿಪಿಐ ಮಹೇಂದ್ರ ನಾಯಕ್ ಪೊಲೀಸ್ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಮಹೇಂದ್ರ ನಾಯಕ್ ಅವರು 2010ರಲ್ಲಿ ಪೊಲೀಸ್ ಹುದ್ದೆಗೆ ನೇರ ನೇಮಕಾತಿ ಹೊಂದಿದ್ದರು. ಅವರು ಸದ್ಯ ಬಾಗಲಕೋಟೆಯಲ್ಲಿ ಲೋಕಾಯುಕ್ತ ಸಿಪಿಐ ಆಗಿ ಕೆಲಸ ಮಾಡುತ್ತಿದ್ದಾರೆ. ಆದರೆ ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜೀನಾಮೆ ಸಲ್ಲಿಸಿರುವ ಪೊಲೀಸ್ ಅಧಿಕಾರಿ ಮಹೇಂದ್ರ ನಾಯಕ್ ವಿಜಯಪುರ ಜಿಲ್ಲೆಯ ನಾಗಠಾಣ (ಮೀಸಲು) ಮತಕ್ಷೇತ್ರದ ಬಿಜೆಪಿ ಆಕಾಂಕ್ಷಿ ಆಗಿದ್ದಾರೆ.

ವಿಜಯಪುರ ತಾಲೂಕಿನ ಐನಾಪೂರ ಗ್ರಾಮದ ರೈತ ಕುಟುಂಬದಿಂದ ಬಂದಿರೋ ಮಹೇಂದ್ರ ನಾಯಕ್ ನಾಗಠಾಣ ಕ್ಷೇತ್ರದ ಪ್ರಬಲ ಲಂಬಾಣಿ ಸಮುದಾಯಕ್ಕೆ ಸೇರಿರುವರಾಗಿದ್ದಾರೆ. ಆರಂಭದಿಂದಲೂ ಬಿಜೆಪಿ ಹಾಗೂ ಆರ್ ಎಸ್ಎಸ್ ಒಡನಾಟ ಹೊಂದಿದ್ದಾರೆ. ಆರ್ ಎಸ್ಎಸ್ ನ ಹಿರಿಯ ನಾಯಕರು ಹಾಗೂ ಇತರರೊಂದಿಗೆ ಉತ್ತಮ ಭಾಂದವ್ಯ ಇಟ್ಟುಕೊಂಡಿದ್ದಾರೆ. ವಿದ್ಯಾರ್ಥಿ ದೆಸೆಯಿಂದಲೂ ಎಬಿವಿಪಿ, ಭಜರಂಗದಳ ಹಾಗೂ ಹಿಂದೂಪರ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದವರು.