ಕೋಲ್ಕತ್ತಾ : ಕಚ್ಛಾ ಬಾಂಬ್ ಸ್ಫೋಟಗೊಂಡು ಬಿಜೆಪಿಯ ಆರು ಮಂದಿ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ.
ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದ ವೇಳೆ ದುಷ್ಕರ್ಮಿಗಳು ಬಿಜೆಪಿ ಕಾರ್ಯಕರ್ತರ ಮೇಲೆ ಕಚ್ಛಾ ಬಾಂಬ್ ದಾಳಿ ನಡೆಸಿದ್ದಾರೆ. ಪರಿಣಾಮ ಆರು ಜನರಿಗೆ ಗಂಭೀರವಾಗಿ ಗಾಯಗಳಾಗಿವೆ. ಗಾಯಳುಗಳನ್ನು ಕ್ಯಾನಿಂಗ್ ಉಪವಿಭಾಗದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಗೊಂಡಿರುವ ಬಿಜೆಪಿ ಕಾರ್ಯಕರ್ತರನ್ನು ಶೋವನ್ ದೇಬ್ ನಾಥ್, ವಿಕ್ರಮ್ ಶಿಲ್, ಸ್ವಪನ್ ಕುರಳಿ, ಅರ್ಪಣ್ ದೇಬ್ ನಾಥ್, ಮಹಾದೇವ್ ನಾಯಕ್ ಎಂದು ಗುರುತಿಸಲಾಗಿದ್ದು, ಘಟನೆಯ ಬಳಿಕ ಗಾಯಗೊಂಡ ಬಿಜೆಪಿ ಕಾರ್ಯಕರ್ತರು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ನಮ್ಮ ಮೇಲೆ ಬಾಂಬ್ ಎಸೆದಿದ್ದಾರೆ ಎಂದು ಗಾಯಾಳುಗಳು ಆರೋಪಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.










