ಬಿಜೆಪಿ ನಾಯಕನನ್ನು ಹತ್ಯೆ ಮಾಡಿರುವ ದುಷ್ಕರ್ಮಿಗಳು…

179
firstsuddi

ಬೆಳಗಾವಿ : ಬಿಜೆಪಿ ನಾಯಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಬೈಲೂರು ಗ್ರಾಮದ ಬಳಿ ನಡೆದಿದೆ. ನಾಗಪ್ಪಾ ಜಿಡ್ಡನ್ನವರ(45) ಕೊಲೆಯಾದ ವ್ಯಕ್ತಿ. ನಾಗಪ್ಪಾ ಜಿಡ್ಡನ್ನವರ ಅವರು ಸಂತಿ ಬಸ್ತವಾಡ ಗ್ರಾಮದ ನಿವಾಸಿಯಾಗಿದ್ದು, ಸಂತಿ ಬಸ್ತವಾಡ ಗ್ರಾಮ ಪಂಚಾಯಿತಿಯ ಸದಸ್ಯರಾಗಿದ್ದರು.ನಿನ್ನೆ ರಾತ್ರಿ ಮನೆಗೆ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದ್ದು, ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.