ಬಿಜೆಪಿ ಪಕ್ಷದ ವಿರುದ್ಧ ಹೋರಾಟ ಮಾಡುವ ಶಕ್ತಿ ಕಾಂಗ್ರೆಸ್‍ನಲ್ಲಿ ಉಳಿದಿಲ್ಲ : ಹೆಚ್.ಡಿ. ಕುಮಾರಸ್ವಾಮಿ.

187
firstsuddi

ಚಿಕ್ಕಬಳ್ಳಾಪುರ : ಬಿಜೆಪಿ ಪಕ್ಷದ ವಿರುದ್ಧ ಹೋರಾಟ ಮಾಡುವ ಶಕ್ತಿ ಕಾಂಗ್ರೆಸ್‍ನಲ್ಲಿ ಉಳಿದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ. ನಂದಿ ಗ್ರಾಮದ ಬೋಗನಂದೀಶ್ವರ ದೇವಾಲಯದಲ್ಲಿ ದೇವರ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನಲ್ಲಿ ಬಿಜೆಪಿ ವಿರುದ್ಧ ಹೋರಾಟ ಮಾಡುವ ಶಕ್ತಿ ಉಳಿದಿಲ್ಲ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಜೆಡಿಎಸ್‍ನಿಂದ ಸ್ಪರ್ಧಿಸಲು ಸಮರ್ಥ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದೇನೆ. ಬಿಜೆಪಿ ಹಾಗೂ ಕಾಂಗ್ರೆಸ್ ಆಭ್ಯರ್ಥಿಗಳನ್ನು ಸೋಲಿಸುವ ಉದ್ದೇಶದಿಂದಲೇ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇನೆ. ಎವರಿ ಡೇ ಈಸ್ ನಾಟ್ ಎ ಸಂಡೇ ಇದನ್ನು ಅನರ್ಹ ಶಾಸಕ ಡಾ. ಕೆ. ಸುಧಾಕರ್ ಅವರು ತಿಳಿದುಕೊಳ್ಳಬೇಕು. ಎಲ್ಲಾ ಸಮಯದಲ್ಲೂ ಜನರನ್ನು ದಾರಿ ತಪ್ಪಿಸಲು ಸಾಧ್ಯವಿಲ್ಲ. ಈಬಾರಿ ಚುನಾವಣೆಯಲ್ಲಿ ಹಣದ ಹೊಳೆ ಹರಿಸಿ ಚುನಾವಣೆ ಗೆಲ್ಲುತ್ತೇನೆ ಎಂದು ಹೊರಟಿದ್ದಾರೆ. ಕಳೆದ ವರ್ಷ ಕುಕ್ಕರ್ ಹಾಗೂ ಮಿಕ್ಸಿ ಕೊಟ್ಟಿದ್ದರು. ಈ ವರ್ಷ ಏನುನ್ನು ಕೊಡುವುದಕ್ಕೆ ತಯಾರಿ ಮಾಡಿದ್ದಾರೋ ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.