ಬಿಜೆಪಿ ಮುಖಂಡನ ಸಹೋದರನ ರೈಸ್‍ಮಿಲ್‍ನಿಂದ 700 ಕ್ವಿಂಟಾಲ್ ಅಕ್ಕಿ ಜಪ್ತಿ…

57
firstusddi

ಯಾದಗಿರಿ: ಜಿಲ್ಲೆಯ ಶಹಾಪುರದಲ್ಲಿ ಪಡಿತರ ಅಕ್ಕಿ ಕಳ್ಳತನ ಕೇಸ್​​ಗೆ ಟ್ವಿಸ್ಟ್ ಸಿಕ್ಕಿದೆ. ಚಿತ್ತಾಪುರ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ್ ಸಹೋದರ ರಾಜು ರಾಠೋಡ್​ಗೆ ಸೇರಿದ ರೈಸ್ ಮಿಲ್ ನಲ್ಲಿ ಬರೋಬ್ಬರಿ 700 ಕ್ವಿಂಟಾಲ್ ಅಕ್ಕಿ ವಶಕ್ಕೆ ಪಡೆಯಲಾಗಿದೆ.

ಜಿಲ್ಲೆಯ ಗುರುಮಠಕಲ್ನಲ್ಲಿರುವ ಲಕ್ಷ್ಮೀ ವೆಂಕಟೇಶ್ವರ ರೈಸ್‍ಮಿಲ್‍ನಿಂದ ಅಕ್ಕಿ ಜಪ್ತಿ ಮಾಡಲಾಗಿದೆ. ಸುರಪುರ ಡಿವೈಎಸ್‌ಪಿ ಜಾವೇದ್ ಇನಾಮ್ದಾರ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ದಾಳಿ ವೇಳೆ ಪಾಲಿಶ್ ಮಾಡಿದ್ದ 630 ಕ್ವಿಂಟಾಲ್ ಪಡಿತರ ಅಕ್ಕಿ ಸೇರಿ ಒಟ್ಟು 700 ಕ್ವಿಂಟಾಲ್ ಅಕ್ಕಿ ವಶಪಡಿಸಿಕೊಳ್ಳಲಾಗಿದೆ. 630 ಕ್ವಿಂಟಾಲ್ ಪಾಲಿಶ್ ಮಾಡಿರೋ ಪಡಿತರ ಅಕ್ಕಿಯ ಜೊತೆಗೆ 70 ಕ್ವಿಂಟಾಲ್ ಅಕ್ಕಿ ಪಾಲಿಶ್ ಮಾಡಲು ರೆಡಿ ಮಾಡಿಟ್ಟುಕೊಂಡಿದ್ದರು ಎನ್ನಲಾಗಿದೆ.

ಸದ್ಯ ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳು ರಾಜು ರಾಠೋಡ್ ಗೆ ಅಕ್ಕಿ ಮಾರಾಟ ಮಾಡಿರೋದಾಗಿ ಹೇಳಿಕೆ ನೀಡಿದ್ದಾರೆ. ಹೀಗಾಗಿ ಕಳೆದ 15 ದಿನಗಳಿಂದ ತಲೆ ಮರಿಸಿಕೊಂಡಿರುವ ರಾಜು ರಾಠೋಡ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.