ಬಿಜೆಪಿ ಲಸಿಕೆ ವಿರೋಧಿಸುತ್ತೇವೆ, ಭಾರತ ಲಸಿಕೆ ಸ್ವಾಗತಿಸುತ್ತೇವೆ : ಅಖಿಲೇಶ್ ಯಾದವ್.

86
firstsuddi

ಲಕ್ನೋ : ಪ್ರಧಾನಿ ನರೇಂದ್ರ ಮೋದಿಯವರು ನಿನ್ನೆ ಸಂಜೆ ತಮ್ಮ ಭಾಷಣದಲ್ಲಿ ಜೂನ್ 21ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೇಂದ್ರದಿಂದಲೇ ಉಚಿತ ಲಸಿಕೆ ನೀಡಲಾಗುತ್ತದೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು, ಕೊರೊನಾ ಲಸಿಕೆಗೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಜನರ ಆಕ್ರೋಶಕ್ಕೆ ಮಣಿದು ಕೇಂದ್ರ ಸರ್ಕಾರ ಉಚಿತ ಲಸಿಕೆ ನೀಡಲು ಮುಂದಾಗಿದೆ. ಜನಸಾಮಾನ್ಯರ ಆಕ್ರೋಶದ ಹಿನ್ನೆಲೆಯಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು ಲಸಿಕೆಯ ಮೇಲೆ ನಿಯಂತ್ರಣ ಹೊಂದಲು ನಿರ್ಧರಿಸಿದೆ. ನಾವು ಬಿಜೆಪಿಯ ಲಸಿಕೆಗೆ ವಿರೋಧ ವ್ಯಕ್ತಪಡಿಸುತ್ತೇವೆ. ಆದರೆ ಭಾರತ ಸರ್ಕಾರದ ಲಸಿಕೆಯನ್ನು ಸ್ವಾಗತಿಸುತ್ತೇವೆ. ಹಾಗೆಯೇ ನಾವು ಕೂಡ ಲಸಿಕೆ ಪಡೆಯುತ್ತೇವೆ. ಅಲ್ಲದೆ ಜನರನ್ನು ಕೂಡ ಲಸಿಕೆ ತೆಗೆದುಕೊಳ್ಳುವಂತೆ ಪ್ರೋತ್ಸಾಹಿಸುವುದಾಗಿ ಅಖಿಲೇಶ್ ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಇನ್ನೂ ಅಖಿಲೇಶ್ ಯಾದವ್ ತಂದೆ ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರು ನಿನ್ನೆ ಲಸಿಕೆ ಪಡೆದಿರುವ ಫೋಟೋವನ್ನು ಪಕ್ಷದ ಅಧೀಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದೆ.