ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ: ದಾಖಲಾಯ್ತು ಇನ್ನೊಂದು ಗಂಭೀರ ಪ್ರಕರಣ.

46

ರಾಮನಗರ: ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿನಿಂದನೆ ಮಾಡಿರುವ ಕೇಸ್‍ನಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಅವರ ವಿರುದ್ಧ ಒಕ್ಕಲಿಗ, ದಲಿತ ಸಂಘಟನೆಗಳು ಸರಣಿ ಪ್ರತಿಭಟನೆ ಮಾಡ್ತಿವೆ. ಕಾಂಗ್ರೆಸ್‍ಗೆ ಈ ಪ್ರಕರಣ ಅಸ್ತ್ರವಾಗಿ ಸಿಕ್ಕಿದೆ. ಆದರೆ ಇದೀಗ ಇದರ ನಡುವೆ ಮುನಿರತ್ನಗೆ ಮತ್ತೊಂದು ಕಂಟಕ ಎದುರಾಗಿದೆ. ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಬೆಂಗಳೂರು ಮೂಲದ ಮಹಿಳೆಯೊಬ್ರು ಮುನಿರತ್ನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ದೂರು ದಾಖಲಿಸಿದ್ದಾರೆ.
ಖ.ಖ.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪದಡಿ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಡಿವೈಎಸ್‍ಪಿ ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಹಾಜರಾಗಿ ಸಂತ್ರಸ್ತೆ 2 ಗಂಟೆಗೂ ಹೆಚ್ಚು ಕಾಲ ವಿವರಣೆ ನೀಡಿದ್ದಾರೆ. ಇಂದು ಸಂತ್ರಸ್ತೆ ಜೊತೆ ಪೊಲೀಸರು ಸ್ಥಳಮಹಜರು ನಡೆಸಲಿದ್ದಾರೆ. ಘಟನೆ ಸಂಬಂಧ ಶಾಸಕ ಮುನಿರತ್ನ ಸೇರಿ 7 ಜನರ ವಿರುದ್ಧ FIR ದಾಖಲಾಗಿದೆ. ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ, ವಿಜಯ್ ಕುಮಾರ್, ಕಿರಣ್, ಲೋಹಿತ್, ಮಂಜುನಾಥ್, ಲೋಕಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಖಾಸಗಿ ರೆಸಾರ್ಟ್‍ನಲ್ಲಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು DySP ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಮಹಿಳೆ ಆರೋಪ ಮಾಡಿ ಹೇಳಿಕೆ ನೀಡಿದ್ದಾರೆ. 354 a, 354 c, 376(2), 308, 406, 384, 120b 504, 506, 149 IPC ಸೆಕ್ಷನ್ ಅಡಿ ಕೇಸ್ ದಾಖಲಾಗಿದೆ.
ವಿಚಾರಣಾಧೀನ ಕೈದಿಯಾಗಿರೋ ಮುನಿರತ್ನಗೆ ಗುತ್ತಿಗೆದಾರ ಚಲುವರಾಜು ದಾಖಲಿಸಿದ್ದ ವಂಚನೆ ಪ್ರಕರಣದಲ್ಲಿ ರಿಲೀಫ್ ಸಿಕ್ಕಿದೆ. ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‍ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆದ್ರೆ ಜಾತಿ ನಿಂದನೆ ಕೇಸ್‍ನಲ್ಲಿ ಬಿಜೆಪಿ ಶಾಸಕ ಮುನಿರತ್ನ ಸಲ್ಲಿಸಿರುವ ಜಾಮೀನು ಅರ್ಜಿ ಭವಿಷ್ಯ ಇಂದು ನಿರ್ಧಾರವಾಗಲಿದೆ. ಕೋರ್ಟ್‍ನಲ್ಲಿ ವಾದ-ಪ್ರತಿವಾದ ಆಲಿಸಿದ ಕೋರ್ಟ್ ಆದೇಶ ಕಾಯ್ದಿರಿಸಿದ್ದು, ಇಂದು ಆದೇಶ ಪ್ರಕಟಿಸಲಿದೆ. ಜಾಮೀನು ಸಿಗದಿದ್ರೆ ಮುನಿರತ್ನಗೆ ಪರಪ್ಪನ ಅಗ್ರಹಾರ ಜೈಲೇ ಗತಿಯಾಗಲಿದೆ.