ಬಿದರಹಳ್ಳಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

35

ಮೂಡಿಗೆರೆ: ಬಿದರಹಳ್ಳಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆಯನ್ನು ತಾಲೂಕು ಪಂಚಾಯಿತಿಯ ದೀನ್ ದಯಾಳ್ ಸಭಾಂಗಣದಲ್ಲಿ ಶ್ರೀಮತಿ ಎ.ಎಚ್ ರೂಪ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ದಯಾವತಿ ಅವರು ಸಂಜೀವಿನಿ ಒಕ್ಕೂಟ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವಲ್ಲಿ ಯಶಸ್ವಿಯಾಗಿದೆ ಎಂದರು.
ತಾಲೂಕು ವ್ಯವಸ್ಥಾಪಕರಾದ ಶಾಲಿನಿ ಅವರು ಮಾತನಾಡಿ ಮಹಿಳೆಯರು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಲು ಸಂಜೀವಿನಿ ಒಕ್ಕೂಟ ಪ್ರಮುಖ ಪಾತ್ರ ವಹಿಸುತ್ತಿದೆ. ಇನ್ನೂ ಹೆಚ್ಚು ಸಂಘಗಳನ್ನು ರಚನೆ ಮಾಡಿ ಸಂಜೀವಿನಿ ಒಕ್ಕೂಟದ ಸೌಲಭ್ಯಗಳನ್ನು ಮಹಿಳೆಯರು ಪಡೆದುಕೊಳ್ಳುವಂತೆ ಆಗಬೇಕು ಎಂದರು.
ಈ ಸಭೆಯಲ್ಲಿ ಬಿದರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಯೋಗೇಶ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ಶ್ರೀಮತಿ ದುಗ್ಗಮ್ಮ, ಗ್ರಾಮ ಪಂಚಾಯಿತಿಯ ಸದಸ್ಯರಾದ ಪ್ರಶಾಂತ್, ವಿಶ್ವ , ಜಯಲಕ್ಷ್ಮಿ, ತಾಲೂಕು ಒಕ್ಕೂಟದ ಅಧ್ಯಕ್ಷರು ಚಂದ್ರಾವತಿ, ತಾಲೂಕು ಒಕ್ಕೂಟದ ಕಾರ್ಯದರ್ಶಿ ಸರೋಜಾ, ತಾಲೂಕು ವಲಯ ಮೇಲ್ವಿಚಾರಕರಾದ ಅಭಿಜಿತ್, ಅಬ್ದುಲ್ ನಾಜಿಮ್, ಚೈತ್ರ , ಪ್ರೀತಿ, ರಶ್ಮಿತಾ, ಚೈತ್ರ ಹೆಚ್. ಸಿ, ಉಮಾ, ಚೈತ್ರ ಬಿ .ಎನ್, ಪ್ರಿಯಾಂಕ , ಮಮತಾ, ಸುಚಿತ್ರ ಮತ್ತು ಸಂಘದ ಸದಸ್ಯರು ಹಾಜರಿದ್ದರು.