ಬಿಬಿಎಂಪಿ ಕಸದ ಲಾರಿಗೆ ಇಬ್ಬರು ಬಲಿ – ಮೃತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ…

67
firstsuddi

ಬೆಂಗಳೂರು : ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಗ್ರಾಮದಲ್ಲಿ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ನೆಲಮಂಗಲ ತಾಲೂಕಿನ ಮರಳುಕುಂಟೆಯ ಮಾರುತಿ(26) ಮತ್ತು ಮಹೇಶ್(28) ಮೃತರು.

ಘಟನೆ ಖಂಡಿಸಿ ಹುಲಿಕುಂಟೆ ಗ್ರಾಮಸ್ಥರು ಮೃತದೇಹಗಳನ್ನ ಅಪಘಾತ ಸ್ಥಳದಿಂದ ತೆರವು ಮಾಡಲು ಬಿಡದೆ ಧರಣಿ ನಡೆಸಿದ್ದರು. ಮೃತರ ಕುಟುಂಬಗಳಿಗೆ ತಲಾ 50 ಲಕ್ಷ ಪರಿಹಾರ ನೀಡುವಂತೆ ಗ್ರಾಮಸ್ಥರು ಪಟ್ಟು ಹಿಡಿದರು.

ಸ್ಥಳಕ್ಕೆ ಬಿಬಿಎಂಪಿ ಅಧಿಕಾರಿಗಳು ಆಗಮಿಸಿ ಮೃತಪಟ್ಟ ಇಬ್ಬರಿಗೂ ತಲಾ 25 ಲಕ್ಷ ಪರಿಹಾರ ಕೊಡುವುದಾಗಿ ಭರವಸೆ ನೀಡಿದ ನಂತರ ಶವಗಳನ್ನು ಎತ್ತಿ ಗ್ರಾಮಸ್ಥರು ಪ್ರತಿಭಟನೆ ಕೈಬಿಟ್ಟಿದ್ದಾರೆ.