ಬೆಂಗಳೂರು : ಇಂದು ನಡೆದ ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಜೋಗುಪಾಳ್ಯ ವಾರ್ಡಿನ ಬಿಜೆಪಿ ಸದಸ್ಯ ಗೌತಮ್ ಕುಮಾರ್ ಜೈನ್ ಅವರು ಮೇಯರ್ ಆಗಿ ಆಯ್ಕೆಯಾಗಿದ್ದು, 4ವರ್ಷದ ಬಳಿಕ ಬಿಜೆಪಿ ಈ ಬಾರಿ ಬಿಬಿಎಂಪಿ ಮೇಯರ್ ಸ್ಥಾನವನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗಳಿಸಿದ್ದರೂ ಕೊನೆ ಕ್ಷಣದಲ್ಲಿ ಮೇಯರ್ ಹುದ್ದೆ ಕೈ ತಪ್ಪಿತ್ತು. ಆದರೆ ಈ ಬಾರಿ ಒಟ್ಟು 129 ಮತಗಳನ್ನು ಪಡೆಯುವ ಮೂಲಕ ಬಿಜೆಪಿ ಸದಸ್ಯ ಗೌತಮ್ ಕುಮಾರ್ ಜೈನ್ ಅವರು ಮೇಯರ್ ಹುದ್ದೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.










