ಚಿಕ್ಕಮಗಳೂರು: ಕುಟುಂಬ ಸಮಾರಂಭದಲ್ಲಿ ಬಿರಿಯಾನಿ ಸೇವಿಸಿ 17 ಮಂದಿ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಮರವಂಜಿ ಗ್ರಾಮದ ಮನೆಯೊಂದರಲ್ಲಿ ನಡೆದಿದೆ. ಅಸ್ವಸ್ಥಗೊಂಡವರು ಕಡೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಾಲೂಕಿನ ಮರವಂಜಿ ಗ್ರಾಮದ ಮನೆಯೊಂದರಲ್ಲಿ ಶುಭಕಾರ್ಯವೊಂದು ನಡೆದಿತ್ತು. ಕಾರ್ಯಕ್ರಮ ಮುಗಿದ ಬಳಿಕ ಸಂಬಂಧಿಕರಿಗಾಗಿ ಬಿರಿಯಾನಿ ತಯಾರಿಸಿದ್ದರು. ಆ ಬಿರಿಯಾನಿ ಸೇವಿಸಿದವರಿಗೆ ಭೇದಿ, ವಾಂತಿ ಕಾಣಿಸಿಕೊಂಡಿದ್ದು 17 ಜನ ಗ್ರಾಮಸ್ಥರು ಅಸ್ವಸ್ಥರಾಗಿ ಕಡೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕೂಡಲೇ ಪ್ರಾಥಮಿಕ ಚಿಕಿತ್ಸೆ ನೀಡಿದ್ದರಿಂದ ಯಾರ ಪ್ರಾಣಕ್ಕೂ ತೊಂದರೆ ಇಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ
ವಿಷಯ ತಿಳಿದು ಕಡೂರು ಶಾಸಕ ಕೆಎಸ್ ಆನಂದ್ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥಗೊಂಡವರ ಯೋಗಕ್ಷೇಮ ವಿಚಾರಿಸಿದ್ದಾರೆ.










