ಬೆಂಗಳೂರು : ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರ ಮೊಮ್ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಿಎಸ್ ಯಡಿಯೂರಪ್ಪ ಅವರ ದ್ವಿತೀಯ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ ಅವರು ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆ ಆಗಿರುವ ಸೌಂದರ್ಯ 2018ರಲ್ಲಿ ವೈದ್ಯ ಡಾ. ನೀರಜ್ ಅವರನ್ನು ಮದುವೆಯಾಗಿದ್ದರು. ಮೃತ ಸೌಂದರ್ಯಗೆ ಒಂದು ಮಗು ಇದೆ ಎಂದು ತಿಳಿದುಬಂದಿದೆ.
ಸೌಂದರ್ಯ ಪತಿ ನೀರಜ್ ಬೆಳಗ್ಗೆ 8 ಗಂಟೆಗೆ ಕೆಲಸಕ್ಕೆ ಹೋಗಿದ್ದರು. ಇತ್ತ ಸೌಂದರ್ಯ 10 ಗಂಟೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದಿಂದ ಸೌಂದರ್ಯ ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.










