ಬೀದರ್​ನಲ್ಲಿ ಭೀಕರ ರಸ್ತೆ ಅಪಘಾತ – ಐವರು ದಾರುಣ ಸಾವು…

60
firstsuddi

ಬೀದರ್ : ಕಾರಿಗೆ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಮೃತಪಟ್ಟಿರುವ ಘಟನೆ ತಾಲೂಕಿನ ಬಂಗೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೃತರನ್ನು ಹೈದರಾಬಾದ್ ನ ಬೇಗಂಪೇಟೆ ನಿವಾಸಿಗಳಾದ ಗಿರಿಧರ್ (45) ಪತ್ನಿ ಅನಿತಾ (36) ಮಯಾಂಕ್ (2 ) ಅನಿತಾ ತಂಗಿ ಮಗಳು ಪ್ರಿಯಾಂಕಾ (15) ಹಾಗೂ ಕಾರು ಚಾಲಕ ದಿನೇಶ್ (35) ಎಂದು ಗುರುತಿಸಲಾಗಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರ ದೇವಸ್ಥಾನಕ್ಕೆ ದರ್ಶನಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ.

ಇನ್ನು ಅಪಘಾತದಲ್ಲಿ ಐದು ಮಂದಿಗೆ ಗಾಯಗಳಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೀದರ್ ಜಿಲ್ಲಾ ಆಸ್ಪತ್ರೆ ದಾಖಲು ಮಾಡಲಾಗಿದೆ. ಮನ್ನಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.