ಹೈದರಾಬಾದ್: ಬೀದಿ ನಾಯಿಗಳ ದಾಳಿಗೆ 4 ವರ್ಷದ ಪುಟ್ಟ ಬಾಲಕನೊಬ್ಬ ಬಲಿಯಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ವರದಿಗಳ ಪ್ರಕಾರ ಮೃತ ಬಾಲಕನ ತಂದೆ ಗಂಗಾಧರ್ ಘಟನೆ ನಡೆದ ವಸತಿ ಪ್ರದೇಶದ ಆವರಣದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಬಾಲಕ ಅದೇ ವಸತಿ ಪ್ರದೇಶದಲ್ಲಿ ಆಟವಾಡುತ್ತಾ ಸಾಗುತ್ತಿದ್ದಾಗ ಏಕಾಏಕಿ ಕೆಲ ಬೀದಿ ನಾಯಿಗಳು ಬಾಲಕನ ಮೇಲೆ ದಾಳಿ ನಡೆಸಿವೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬಾಲಕ ನಡೆದುಕೊಂಡು ಹೋಗುತ್ತಿರುವಾಗ ಮೂರು ನಾಯಿಗಳು ದಾಳಿ ಮಾಡಿವೆ. ಬಾಲಕ ಅಲ್ಲಿಂದ ಓಡಿ ಹೋಗಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಬಳಿಕ ನಾಯಿಗಳು ಬಾಲಕನ ಇಡೀ ದೇಹಕ್ಕೆ ಕಚ್ಚಿದೆ. ಬಾಲಕನ ಚೀರಾಟ ಕೇಳಿದ ಗಂಗಾಧರ್ ಸ್ಥಳಕ್ಕೆ ದಾವಿಸಿದ್ದಾರೆ. ತಕ್ಷಣವೇ ಅವರು ಮಗನನ್ನು ಆಸ್ಪತ್ರೆಗೆ ದಾಖಲಿಸಿದರೂ ಅಷ್ಟರಲ್ಲೇ ಬಾಲಕ ಸಾವನ್ನಪ್ಪಿದ್ದಾನೆ.
ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










