ಬುರ್ಖಾ ಧರಿಸಿ ಅನುಚಿತವಾಗಿ ವರ್ತಿಸಿದರೆ ಧರ್ಮದೇಟು – ವಾಟ್ಸಾಪ್ ಗ್ರೂಪ್​​ನಲ್ಲಿ ಬೆದರಿಕೆ…

56
firstsuddi

ಮಂಗಳೂರು : ನಗರದಲ್ಲಿ ಹೊಸ ವಿವಾದವೊಂದು ಸದ್ದು ಮಾಡುತ್ತಿದೆ. ಬುರ್ಖಾ ಧರಿಸಿ ಅಸಭ್ಯವಾಗಿ ವರ್ತಿಸುವ ಯುವತಿಯರನ್ನು ಟಾರ್ಗೆಟ್ ಮಾಡುತ್ತಿದೆ. ಈ ಯುವತಿಯರ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಎಚ್ಚರಿಕೆಯ ಸಂದೇಶವನ್ನು ಹರಿ ಬಿಡಲಾಗಿದೆ.

ಬುರ್ಖಾ ಧರಿಸಿ ಹಿಂದೂ ಯುವಕರೊಂದಿಗೆ ಪಾರ್ಕ್, ಮಾಲ್, ಥಿಯೇಟರ್ ಸುತ್ತುವ ಯುವತಿಯರನ್ನು ಟಾರ್ಗೆಟ್ ಮಾಡಿ ಅವರಿಗೆ ಮುಸ್ಲಿಂ ಡಿಫೆನ್ಸ್ ಫೋರ್ಸ್(ಎಂಡಿಎಫ್) ಬೆದರಿಕೆ ಹಾಕಿದೆ.

ಪೋಸ್ಟ್ ನಲ್ಲಿ ಏನಿದೆ?
ಸಿಟಿ ಸೆಂಟರ್ ನ ಕಾರ್ ಪಾರ್ಕಿಂಗ್ ಮಾಡುವ ಸ್ಥಳದಲ್ಲಿ ಬುರ್ಖಾ ಹಾಕಿಕೊಂಡು ನಿಮ್ಮ ಅಸಭ್ಯ ವರ್ತನೆಗಳನ್ನು ಕಂಡು ನಮ್ಮ ಕಾರ್ಯಕರ್ತರು ಬುದ್ಧಿ ಮಾತು ಹೇಳಿ ಪೋಷಕರಿಗೂ ತಿಳಿಸಿ ಎಚ್ಚರಿಕೆಯನ್ನು ಕೊಟ್ಟಿದ್ದೇವೆ. ಆದ್ದರಿಂದ ಇನ್ನೂ ಮುಂದೆ ಇಂತಹ ಅಹಿತಕರ ಘಟನೆ ನಮ್ಮ ಕಾರ್ಯಕರ್ತರ ಕಣ್ಣಿಗೆ ಬಿದ್ದರೆ, ಧರ್ಮದೇಟು ಕೊಟ್ಟು ಯಾವುದೇ ಮುಲಾಜಿಲ್ಲದೆ ಕಾರ್ಯ ನಿರ್ವಹಿಸಲಿದ್ದೇವೆ. ಆದ್ದರಿಂದ ಪೋಷಕರೆ ನಿಮ್ಮ-ನಿಮ್ಮ ಮಕ್ಕಳ ಚಲನವಲನಗಳನ್ನು ಪರಿಶೀಲನೆ ಮಾಡಿ ಕಾಲೇಜ್ ಗೆ ಎಷ್ಟು ಗಂಟೆಗೆ ತಲಾಪುತ್ತಾಳೆ, ಕಾಲೇಜಿನಿಂದ ಮನೆಗೆ ಎಷ್ಟು ಗಂಟೆಗೆ ತಲುಪುತ್ತಾಳೆ ಎಂದು ಗಮನಿಸಿ ಎಂಬ ಪೋಸ್ಟ್ ಗಳನ್ನು ಎಂಡಿಎಫ್ ಹಾಕುತ್ತಿದೆ.

ಎಂಎಫ್ ಡಿ ಹಾಗೂ ಮಂಗಳೂರು ಮುಸ್ಲಿಂ ಪೇಜ್ ಬಗ್ಗೆ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಹಿನ್ನೆಲೆ ಪೊಲೀಸರು ಸೋಶಿಯಲ್ ಮೀಡಿಯಾ ಮೇಲೆ ತೀವ್ರ ನಿಗಾವನ್ನು ಇಡಲು ಪ್ರತ್ಯೇಕ ತಂಡವನ್ನು ರಚಿಸಿದ್ದಾರೆ.