ಬೂಸ್ಟರ್ ಡೋಸ್ ಲಸಿಕಾ ಅಭಿಯಾನಕ್ಕೆ ಸಿಎಂ ಚಾಲನೆ…

61
firstsuddi

ಬೆಂಗಳೂರು : ಇಂದಿನಿಂದ ಆರೋಗ್ಯ ಸಿಬ್ಬಂದಿ, ಕೋವಿಡ್ ನಿಯಂತ್ರಣದ ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಬೂಸ್ಟರ್ ಡೋಸ್ ನೀಡಲಾಗುತ್ತಿದೆ.

ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಶಿವಾಜಿನಗರದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಕಾಲೇಜಿನಲ್ಲಿ ಬೂಸ್ಟರ್ ಡೋಸ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು. ಇವರಿಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಸಾಥ್ ನೀಡಿದರು.

ಚಾಲನೆ ನೀಡಿದ ಬಳಿಕ ಮಾತಾನಾಡಿದ ಸಿಎಂ ಬೊಮ್ಮಾಯಿ, ಇಂದಿನಿಂದ 60 ವರ್ಷ ಮೇಲ್ಪಟ್ಟವರಿಗೆ, ಆರೋಗ್ಯ ಹಾಗೂ ಫ್ರಂಟ್ ಲೈನ್ ವರ್ಕರ್ಸ್ ಗೆ ಮುನ್ನೆಚ್ಚರಿಕಾ ಲಸಿಕೆ ನೀಡಲಾಗುತ್ತಿದೆ. ಕೋವಿಡ್​​ನಿಂದ ರಕ್ಷಣೆ ಆಗಬೇಕು. ಇದಕ್ಕೆ ರಕ್ಷಾಕವಚ ಬೇಕಿದ್ದು, ವ್ಯಾಕ್ಸಿನೇಷನ್ ಅಗತ್ಯ ಎಂದರು.

ನಾವು ಕಷ್ಟಪಟ್ಟು ಕೊರೊನಾ ನಿಯಂತ್ರಣ ಮಾಡುತ್ತಿದ್ದೇವೆ. ಆದರೆ ವಿರೋಧ ಪಕ್ಷ ಪಾದಯಾತ್ರೆ ಹೆಸರಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ ಮಾಡುತ್ತಿದ್ದಾರೆ. ಕಾನೂನು ವ್ಯಾಪ್ತಿಯಲ್ಲಿ ಏನು ಕ್ರಮ ಕೈಗೊಳ್ಳಬೇಕು ತೆಗೆದುಕೊಳ್ಳುತ್ತೇವೆ. ರಾಜಕಾರಣಿಗಳಿಗೆ ಒಂದು ಜನರಿಗೆ ಒಂದು ಕಾನೂನು ಮಾಡೋಲ್ಲ ಎಂದು ಸಿಎಂ ತಿಳಿಸಿದರು.