ಬೆಂಕಿಗಾಹುತಿಯಾದ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ.

50
firstsuddi

ಮಂಗಳೂರು : ಎಲೆಕ್ಟ್ರಿಕ್ ಸ್ಕೂಟರ್ ಶೋ ರೂಂ ಬೆಂಕಿಗಾಹುತಿಯಾದ ಘಟನೆ ನಗರದಲ್ಲಿ ನಡೆದಿದೆ.

ನಗರದ ನಾಗೂರಿಯಲ್ಲಿರುವ ಒಕಿನಾವ ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಇಂದು ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದ್ದು, ಶೋರೂಂನಲ್ಲಿದ್ದ 10ಕ್ಕೂ ಹೆಚ್ಚು ಸ್ಕೂಟರ್ ಗಳು ಬೆಂಕಿಗಾಹುತಿಯಾಗಿವೆ. ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ.

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದ್ದರೂ, ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.