ಬಾಗಲಕೋಟೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ 3 ಅಂಗಡಿಗಳಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಜಿಲ್ಲೆಯ ಬಾದಾಮಿ ಪಟ್ಟಣದಲ್ಲಿ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಭೀಮಸಿ ಬಡಿಗೇರ ಎಂಬುವವರಿಗೆ ಸೇರಿದ ಫರ್ನಿಚರ್ ಶಾಪ್, ಹೂವಪ್ಪ ಕಲಾಲ ಎಂಬುವವರಿಗೆ ಸೇರಿದ ಹೋಟೆಲ್ ಹಾಗೂ ಅಲ್ಲಾಭಕ್ಷ ಹೆಬ್ಬಳ್ಳಿ ಎಂಬುವವರಿಗೆ ಸೇರಿದ ಬೈಕ್ ಗ್ಯಾರೇಜ್ ನಲ್ಲಿ ಬೆಂಕಿಯಿಂದ ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಲಕ್ಷಾಂತರ ರೂ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.










